Sunday, April 28, 2024
Homeಕರಾವಳಿವೇಣೂರು, ನಾರಾವಿಯಲ್ಲಿ ಹರೀಶ್‌ ಪೂಂಜ ಸಾರ್ವಜನಿಕ ಪ್ರಚಾರ ಸಭೆ

ವೇಣೂರು, ನಾರಾವಿಯಲ್ಲಿ ಹರೀಶ್‌ ಪೂಂಜ ಸಾರ್ವಜನಿಕ ಪ್ರಚಾರ ಸಭೆ

spot_img
- Advertisement -
- Advertisement -

ವೇಣೂರು: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ವೇಣೂರು ಮತ್ತು ನಾರಾವಿಯಲ್ಲಿ ಸಾರ್ವಜನಿಕ ಪ್ರಚಾರ ಸಭೆ ನಡೆಯಿತು. ಸಾರ್ವಜನಿಕ ಸಭೆಗಳಲ್ಲಿ ಬೃಹತ್‌ ಸಂಖ್ಯೆಯಲ್ಲಿ ಜನರು ಉಪಸ್ಥಿತರಿದ್ದರು. ಇದು ಬಿಜೆಪಿ ದಾಖಲೆಯ ಅಂತರದಲ್ಲಿ ಗೆಲ್ಲುವ ಮುನ್ಸೂಚನೆಯಾಗಿದೆ ಎಂದು ಜನರು ಅಭಿಪ್ರಾಯಿಸುತ್ತಿದ್ದಾರೆ.

ಸಾರ್ವಜನಿಕ ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಮಾತನಾಡಿ ಬೆಳ್ತಂಗಡಿ ಕ್ಷೇತ್ರದಲ್ಲಿ ಹಿಂದೆಂದೂ ಕಂಡಿರದ ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಮತ್ತಷ್ಟು ಅಭಿವೃದ್ಧಿಗಾಗಿ ದಾಖಲೆಯ ಅಂತರದಿಂದ ಹರೀಶ್‌ ಪೂಂಜ ಅವರನ್ನು ಗೆಲ್ಲಿಸುವಂತೆ ಕರೆ ನೀಡಿದರು‌.

ಶಾಸಕ ಹರೀಶ್ ಪೂಂಜ ಮಾತನಾಡಿ, ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿಗಳೇ ನನಗೆ ಶ್ರೀರಕ್ಷೆಯಾಗಲಿದೆ. ಜನಸೇವೆಗಾಗಿ ಮತ್ತೊಮ್ಮೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದರು.

ಸಭೆಯಲ್ಲಿ ಮಂಡಲ ಬಿಜೆಪಿ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಪೂಜಾರಿ ಕಾಪಿನಡ್ಕ ಹಾಗೂ ಅನೀಶ್ ಪೂಜಾರಿ ವೇಣೂರು, ಅಭ್ಯರ್ಥಿ ಪ್ರಮುಖ್‌ ಜಯಾನಂದ್‌ ಗೌಡ, ಮಾಜಿ ಮಂಡಲ ಅಧ್ಯಕ್ಷರಾದ ಕುಶಾಲಪ್ಪ ಗೌಡ, ಮಂಡಲ ಪದಾಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಮತ್ತು ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!