Wednesday, October 7, 2026
Homeಅಪರಾಧಬಂಟ್ವಾಳದ ಸಿದ್ಧಕಟ್ಟೆಯಲ್ಲಿ ಮಹಿಳೆಯನ್ನು ಕೂಡಿ ಹಾಕಿ ಹಲ್ಲೆ ನಡೆಸಿ ಅತ್ಯಾಚಾರ

ಬಂಟ್ವಾಳದ ಸಿದ್ಧಕಟ್ಟೆಯಲ್ಲಿ ಮಹಿಳೆಯನ್ನು ಕೂಡಿ ಹಾಕಿ ಹಲ್ಲೆ ನಡೆಸಿ ಅತ್ಯಾಚಾರ

- Advertisement -
- Advertisement -

ಬಂಟ್ವಾಳ: ಒಂಟಿಯಾಗಿ ವಾಸುತ್ತಿದ್ದ  52ರ ಹರೆಯದ ಮಹಿಳೆಯನ್ನು ಮನೆಯೊಳಗೆ ಕೂಡಿ ಹಾಕಿ ಹಲ್ಲೆ ನಡೆಸಿ ಅತ್ಯಾಚಾರವೆಸಗಿ ಕೊಲೆ ಬೆದರಿಕೆ ಹಾಕಿದ ಘಟನೆ ಬಂಟ್ವಾಳ ತಾಲೂಕಿನ  ವ್ಯಾಪ್ತಿಯ ಸಂಗಬೆಟ್ಟುವಿನಲ್ಲಿ ನಡೆದಿದೆ.  ಆ. 11 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಅತ್ಯಾಚಾರ ಆರೋಪಿ ಸಿದ್ದಕಟ್ಟೆಯ ಅನಿಲ್ ಎಂಬಾತ ತಲೆಮರೆಸಿಕೊಂಡಿದ್ದಾನೆ. ಮಹಿಳೆಯ ಪತಿ ನಿಧನರಾಗಿದ್ದು, ಮಗಳಿಗೆ ವಿವಾಹವಾಗಿದೆ. ಏಕಾಂಗಿಯಾಗಿದ್ದ ಅವರು ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಆರೋಪಿ ಸಂಜೆ ಹೊತ್ತು ಮಹಿಳೆ ಮನೆಗೆ ನುಗ್ಗಿ ಹಲ್ಲೆ ನಡೆಸಿ ,ಅತ್ಯಾಚಾರ ಮಾಡಿ ಬಳಿಕ ಯಾರಲ್ಲಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿ ಪರಾರಿಯಾಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಬಳಿಕ ಅತ್ಯಾಚಾರಕ್ಕೊಳಗಾದ ಮಹಿಳೆ ಮಗಳಿಗೆ ಹಾಗೂ ಅಳಿಯನಿಗೆ ಪೋನ್ ಕರೆ ಮಾಡಿ ತಿಳಿಸಿದ್ದು, ಈ ಕುರಿತು ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ದ ದೂರು ದಾಖಲಾಗಿದೆ. ಪೊಲೀಸರು ಆರೋಪಿಗೆ ಬಲೆ ಬೀಸಿದ್ದಾರೆ.

- Advertisement -

Latest News

error: Content is protected !!