Friday, May 10, 2024
Homeಕರಾವಳಿವಿಟ್ಲದಲ್ಲಿ ಮದುವೆಗೆ ಬಂದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ...

ವಿಟ್ಲದಲ್ಲಿ ಮದುವೆಗೆ ಬಂದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

spot_img
- Advertisement -
- Advertisement -

ವಿಟ್ಲ: ವಿವಾಹ ಸಮಾರಂಭಕ್ಕೆ ಬಂದಿದ್ದ ಬಾಲಕನ ಮೇಲೆ ಕಬಕ ಮೂಲದ ವ್ಯಕ್ತಿಯೋರ್ವ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ಈ  ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಟ್ಲ- ಪುತ್ತೂರು ರಸ್ತೆಯ ಮನೆಯೊಂದರಲ್ಲಿ ಮದುವೆ ಕಾರ್ಯಕ್ರಮವಿತ್ತು. ಇಲ್ಲಿಗೆ ಪುತ್ತೂರು ಮೂಲದ ಹನ್ನೊಂದು ವರ್ಷದ ಬಾಲಕ ಮೆಹೆಂದಿ ಕಾರ್ಯಕ್ರಮಕ್ಕೆ ಆಗಮಿಸಿದ್ದ. ಇದೇ ವೇಳೆ ಇಲ್ಲಿಗೆ ಬಂದಿದ್ದ ಕಬಕ ಮೂಲದ ಹಮೀದ್ ಯಾನೆ ಮೌಲ ಅಮ್ಮಿ ಎಂಬಾತ ಬಾಲಕನನ್ನು ಪುಸಲಾಯಿಸಿ ಹೊರಗಡೆ ಕರೆದುಕೊಂಡು ಹೋಗಿ ಲೈಂಗಿನ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ.

ಈ ಬಗ್ಗೆ ಬಾಲಕ ಮನೆಯವರಿಗೆ ವಿಚಾರ ತಿಳಿಸಿದ್ದು, ಆತನ ಪೋಷಕರು ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣದ ದಾಖಲಿಸಿದ್ದಾರೆ.

- Advertisement -
spot_img

Latest News

error: Content is protected !!