Thursday, March 28, 2024
HomeUncategorizedಮಂಗಳೂರಿನಲ್ಲಿ ಚಲಿಸುತ್ತಿದ್ದ ರೈಲಿನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ: ಆರೋಪಿಯನ್ನು ಬಂಧಿಸಿದ ಪೊಲೀಸರು

ಮಂಗಳೂರಿನಲ್ಲಿ ಚಲಿಸುತ್ತಿದ್ದ ರೈಲಿನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ: ಆರೋಪಿಯನ್ನು ಬಂಧಿಸಿದ ಪೊಲೀಸರು

spot_img
- Advertisement -
- Advertisement -

ಮಂಗಳೂರು: ಚಲಿಸುತ್ತಿದ್ದ ರೈಲಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ಬಂಧಿಸಿರು ಮಂಗಳೂರಿನಲ್ಲಿ ನಡೆದಿದೆ. ಶುಕ್ರವಾರ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮಂಗಳೂರಿನಲ್ಲಿ ಎಲ್ ಎಲ್ ಬಿ ಓದುತ್ತಿರುವ ವಿದ್ಯಾರ್ಥಿನಿ ಶುಕ್ರವಾರ ಕೇರಳದ ವರ್ಕಳದಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದಳು. ಈ  ವೇಳೆ ಆರೋಪಿ ಆಕೆಗೆ ಕಿರುಕುಳ ನೀಡಿದ್ದಾನೆ. ಬೆಳಗಿನ ಜಾವ ವಿದ್ಯಾರ್ಥಿನಿ ರೈಲಿನಲ್ಲಿ ಮಲಗಿದ್ದ ವೇಳೆ ಸಹಪ್ರಯಾಣಿಕನಾಗಿದ್ದ ಆರೋಪಿ ವಿದ್ಯಾರ್ಥಿನಿಯ ಮೈಮುಟ್ಟಿ ಅನುಚಿತವಾಗಿ ವರ್ತಿಸಿದ್ದಾನೆ.

ಆತನ ವಿಡಿಯೋ ಮಾಡಿದ ಯುವತಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾಳೆ. ಈ ಪೋಸ್ಟ್ ವೈರಲ್ ಆಗಿದ್ದು ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಲ್ಕು ದಿನಗಳ ನಂತರ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

- Advertisement -
spot_img

Latest News

error: Content is protected !!