Friday, June 5, 2026
Homeಕರಾವಳಿಪುತ್ತೂರು; ಕೆಲಸದ ಆಮಿಷವೊಡ್ಡಿ ಯುವತಿಯನ್ನು ಕರೆ ತಂದು ಅತ್ಯಾಚಾರ

ಪುತ್ತೂರು; ಕೆಲಸದ ಆಮಿಷವೊಡ್ಡಿ ಯುವತಿಯನ್ನು ಕರೆ ತಂದು ಅತ್ಯಾಚಾರ

- Advertisement -
- Advertisement -

ಪುತ್ತೂರು; ಕೆಲಸದ ಆಮಿಷವೊಡ್ಡಿ ಯುವತಿಯನ್ನು ಕರೆ ತಂದ ಇಬ್ಬರು ಯುವಕರು ಅತ್ಯಾಚಾರ ಮಾಡಿರುವ  ಘಟನೆ ಪುತ್ತೂರಿನ ಕೆಮ್ಮಾಯಿ ಸಮೀಪದ ಬಾಡಿಗೆ ಮನೆಯೊಂದರಲ್ಲಿ ನಡೆದಿದೆ. ಲೈಂಗಿಕ ದೌರ್ಜನ್ಯ ನಡೆಸಿ ಅತ್ಯಾಚಾರ ನಡೆಸಿ, ಆರೋಪಿಗಳು ಪರಾರಿಯಾಗಿದ್ದಾರೆ.

ಅತ್ಯಾಚಾರಕ್ಕೊಳಗಾದ ಯುವತಿ ಅಸ್ವಸ್ತಗೊಂಡು ಕುಸಿದು ಬಿದ್ದಾಗ ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಿದಾಗ ಯುವಕರ ಈ ಕೃತ್ಯ ಬೆಳಕಿಗೆ ಬಂದಿದೆ. ಸಂತ್ರಸ್ತ ಯುವತಿಯ ದೂರಿನ ಆಧಾರದಲ್ಲಿ ಉಪ್ಪಿನಂಗಡಿ ಕರ್ವೇಲು ನಿವಾಸಿ ಮತ್ತು ಬಂಟ್ವಾಳ ತಾಲೂಕು ನಿವಾಸಿ ಇಬ್ಬರನ್ನು ಪುತ್ತೂರು ಮಹಿಳಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವತಿಗೆ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿಯಬೇಕಿದೆ.

- Advertisement -

Latest News

error: Content is protected !!