Thursday, June 25, 2026
Homeತಾಜಾ ಸುದ್ದಿರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಹರ್ಷಾನಂದಜೀ ವಿಧಿವಶ

ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಹರ್ಷಾನಂದಜೀ ವಿಧಿವಶ

- Advertisement -
- Advertisement -

ಬೆಂಗಳೂರು :ಇಲ್ಲಿನ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಹರ್ಷಾನಂದಜೀ (91) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ನಿನ್ನೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಹೃದಯಾಘಾತ ಸಂಭವಿಸಿತ್ತು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು ಎಂದು ವರದಿಯಾಗಿದೆ.

ಅವರು ಬಸವನಗುಡಿಯಲ್ಲಿರುವ ರಾಮಕೃಷ್ಣಾಶ್ರಮದ ಅಧ್ಯಕ್ಷರಾಗಿ ಸೇವೆಸಲ್ಲಿಸುತ್ತಿದ್ದರು.
ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಅವರ ಅಂತ್ಯ ಕ್ರಿಯೆ ನಡೆಯಲಿದ್ದು ಇಂದು ಬೆಳಗ್ಗೆಯಿಂದ ಮಧ್ಯಾಹ್ನ 12.30 ರವರೆಗೆ ರಾಮಕೃಷ್ಣ ಮಠದ ವಿದ್ಯಾರ್ಥಿ ಭವನದಲ್ಲಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

- Advertisement -

Latest News

error: Content is protected !!