Thursday, July 4, 2024
Homeತಾಜಾ ಸುದ್ದಿಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ನಟಿ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ

ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ನಟಿ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ

spot_img
- Advertisement -
- Advertisement -

ಬೆಂಗಳೂರು; ನಟಿ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಹರ್ಷಿಕಾ ಹಾಗೂ ಬುವನ್ ಪೊನ್ನಣ್ಣ ತಮ್ಮ ಮನೆಗೆ ಹೊಸ ಅತಿಥಿಯ ಆಗಮನವಾಗೋದಾಗಿ ತಿಳಿಸಿದ್ದಾರೆ. ಅಕ್ಟೋಬರ್ ತಿಂಗಳಲ್ಲಿ ಅವರ ಮನೆಗೆ ಪುಟಾಣಿ ಕಂದಮ್ಮನ ಆಗಮನವಾಗಲಿದೆ.

ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿರುವ ಹರ್ಷಿಕಾ ಗೆಳೆಯರೆ ,ಇಂದಿನವರೆಗೂ ನಮ್ಮಿಬ್ಬರಿಗೆ ಸದಾ ಆಶೀರ್ವಾದಿಸುತ್ತಾ ಬಂದಿದ್ದೀರಿ, ಇನ್ನು ಮುಂದೆ ನಿಮ್ಮ ಪ್ರೀತಿ ,ಆಶೀರ್ವಾದ ನಮ್ಮ ಈ ಇನ್ನೊಂದು ಪುಟ್ಟ ಜೀವದ ಮೇಲು ಇರಲಿ. ಅಕ್ಟೋಬರ್ ಗೆ ಕಾತುರದಿಂದ ಕಾಯುತ್ತಿದ್ದೇವೆ.ಇಂತಿ ನಿಮ್ಮ ಭುವನ್ , ಹರ್ಷಿಕಾ. ಎಂದು ಬರೆದುಕೊಂಡಿದ್ದಾರೆ.

ಈಗಾಗಲೇ ತಾರಾ ಜೋಡಿಗಳಾದ ಮಿಲನ ನಾಗರಾಜ್- ಡಾರ್ಲಿಂಗ್ ಕೃಷ್ಣ,  ಕವಿತಾ-ಚಂದನ್, ನೇಹಾ ಗೌಡ- ಚಂದನ್ ತಮ್ಮ ಮೊದ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

- Advertisement -
spot_img

Latest News

error: Content is protected !!