Tuesday, June 9, 2026
Homeತಾಜಾ ಸುದ್ದಿಸ್ಯಾಂಟ್ರೋ ರವಿಯನ್ನು ಮುಗಿಸುವ ಮೂಲಕ ಸರ್ಕಾರದ ರಹಸ್ಯಗಳನ್ನೂ ಮುಗಿಸುವ ಹುನ್ನಾರ ನಡೆದಿದೆಯೇ? ಕಾಂಗ್ರೆಸ್‌

ಸ್ಯಾಂಟ್ರೋ ರವಿಯನ್ನು ಮುಗಿಸುವ ಮೂಲಕ ಸರ್ಕಾರದ ರಹಸ್ಯಗಳನ್ನೂ ಮುಗಿಸುವ ಹುನ್ನಾರ ನಡೆದಿದೆಯೇ? ಕಾಂಗ್ರೆಸ್‌

- Advertisement -
- Advertisement -

ರಾಜ್ಯಾದ್ಯಂದ ಭಾರೀ ಸಂಚಲನ ಮೂಡಿಸಿದ ಸ್ಯಾಂಟ್ರೋ ರವಿ ಪ್ರಕರಣ ರಾಜಕೀಯ ನಾಯಕರ ಕೆಸರೆರಾಚಟಕ್ಕೆ ಇನ್ನಷ್ಟೂ ಪುಷ್ಠಿ ಕೊಟ್ಟಂತಾಗಿದೆ. ಇದೀಗ ಸ್ಯಾಂಟ್ರೋ ರವಿ ವಿಚಾರವಾಗಿ ಕಾಂಗ್ರೆಸ್‌ ಟ್ವೀಟ್‌ ಮಾಡಿದ್ದು ಭಾರೀ ಚರ್ಚೆ ಹಾಗೂ ಕುತೂಹಲಕ್ಕೆ ಕಾರಣವಾಗಿದೆ.

ಟ್ವೀಟ್‌ ನಲ್ಲಿ ಸ್ಯಾಂಟ್ರೋ ರವಿಯೊಳಗೆ ಅಡಗಿದ್ದ ಬಿಜೆಪಿಗರ ಭಯಂಕರ ಸತ್ಯಗಳನ್ನು ಸಮಾಧಿ ಮಾಡಲು ಹೊರಟಿದೆಯೇ ಸರ್ಕಾರ? ಸಿಐಡಿ ಕಸ್ಟಡಿಯಲ್ಲಿರುವ ಸ್ಯಾಂಟ್ರೋ ರವಿ ಆತ್ಮಹತ್ಯೆಗೆ ಯತ್ನಿಸಿದ್ದಾನಂತೆ. ಇದು ಆತ್ಮಹತ್ಯೆ ಯತ್ನವೋ, ಕೊಲೆ ಯತ್ನವೋ? ಸ್ಯಾಂಟ್ರೋ ರವಿಯನ್ನು ಮುಗಿಸುವ ಮೂಲಕ ಸರ್ಕಾರದ ರಹಸ್ಯಗಳನ್ನೂ ಮುಗಿಸುವ ಹುನ್ನಾರ ನಡೆದಿದೆಯೇ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

- Advertisement -

Latest News

error: Content is protected !!