Saturday, June 6, 2026
Homeತಾಜಾ ಸುದ್ದಿಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಹಿಂಬಾಲಿಸಿ ಹಾಸನ ನಗರಸಭೆ ಸದಸ್ಯನ ಭೀಕರ ಹತ್ಯೆ

ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಹಿಂಬಾಲಿಸಿ ಹಾಸನ ನಗರಸಭೆ ಸದಸ್ಯನ ಭೀಕರ ಹತ್ಯೆ

- Advertisement -
- Advertisement -

ಹಾಸನ: ಹಾಸನ ನಗರಸಭೆ ಸದಸ್ಯರೊಬ್ಬನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಹಾಸನ ನಗರಸಭೆ ಜೆಡಿಎಸ್ ಸದಸ್ಯ ಪ್ರಶಾಂತ್ ಬೈಕ್ ನಲ್ಲಿ‌ ತೆರಳುತ್ತಿದ್ದ ವೇಳೆ ಹಿಂಬಾಲಿಸಿ ಅಟ್ಟಾಡಿಸಿ ಕೊಲೆ ಮಾಡಲಾಗಿದೆ.

ಹಾಸನ ನಗರದ ಲಕ್ಷ್ಮಿ ಪುರ ಬಡಾವಣೆಯಲ್ಲಿ ಹತ್ಯೆ ನಡೆದಿದ್ದು, ಪ್ರಶಾಂತ್, ಹಾಸನ ನಗರದ 16 ನೇ ವಾರ್ಡ್ ನಿಂದ ಜೆಡಿಎಸ್ ನಿಂದ ಆಯ್ಕೆಯಾಗಿದ್ದರು. ಇಂದು ಸಂಜೆ ಕೆಲಸ ಮುಗಿಸಿ ಮನೆಗೆ ತೆರಳುವ ವೇಳೆ ಅಟ್ಯಾಕ್ ಮಾಡಿ ಹತ್ಯೆಗೈಯ್ಯಲಾಗಿದೆ.

ಹಾಸನ ಪೆನ್ಷನ್ ಮೊಹಲ್ಲಾ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಭೇಟಿ ನೀಡಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ

- Advertisement -

Latest News

error: Content is protected !!