Monday, August 31, 2026
Homeತಾಜಾ ಸುದ್ದಿಹಾಥರಸ್ ಜಿಲ್ಲೆಯಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ; ಕೊನೆಯುಸಿರೆಳೆದ ಆರು ವರ್ಷದ ಕಂದಮ್ಮ!…

ಹಾಥರಸ್ ಜಿಲ್ಲೆಯಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ; ಕೊನೆಯುಸಿರೆಳೆದ ಆರು ವರ್ಷದ ಕಂದಮ್ಮ!…

- Advertisement -
- Advertisement -

ಅಲೀಗಡ: ಹಾಥರಸ್ ಜಿಲ್ಲೆಯಲ್ಲಿ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರದ ಬೆನ್ನಲ್ಲೇ ಸಂಬಂಧಿಯಿಂದಲೇ ಅತ್ಯಾಚಾರಕ್ಕೆ ಒಳಗಾಗಿದ್ದ ಅದೇ ಜಿಲ್ಲೆಯ ಆರು ವರ್ಷದ ಬಾಲಕಿಯೊಬ್ಬಳು ಚಿಕಿತ್ಸೆಗೆ ಸ್ಪಂದಿಸದೆ ದೆಹಲಿಯ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದಾಳೆ.

‘ಅಲೀಗಡ ಜಿಲ್ಲೆಯ ಇಗ್ಲಾಸ್‌ ಪ್ರದೇಶದ ಸಂಬಂಧಿಯೊಬ್ಬರ ಮನೆಯಲ್ಲೇ ಬಾಲಕಿಯನ್ನು ಕೂಡಿಹಾಕಲಾಗಿತ್ತು. ಅಲ್ಲೇ ಬಾಲಕಿಯ ಮೇಲೆ ಅತ್ಯಾಚಾರ ಆಗಿದ್ದು ‘ಸಾಮಾಜಿಕ ಸಂಸ್ಥೆಯೊಂದರ ದೂರನ್ನು ಆಧರಿಸಿ ಮನೆಯ ಮೇಲೆ ದಾಳಿ ನಡೆಸಿ ಸಂತ್ರಸ್ತೆಯನ್ನು ರಕ್ಷಿಸಿ ಜವಾಹರ್‌ಲಾಲ್‌ ನೆಹರೂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕಿಯ ಆರೋಗ್ಯ ತೀವ್ರವಾಗಿ ಹದಗೆಟ್ಟ ಕಾರಣ, ಆಕೆಯನ್ನು ದೆಹಲಿಯ ಸಫ್ದಾರ್‌ಜಂಗ್‌ ಆಸ್ಪತ್ರೆಗೆ ದಾಖಲಿಸಲಾಗಿ, ಚಿಕಿತ್ಸೆಗೆ ಸ್ಪಂದಿಸದೆ ಸಂತ್ರಸ್ತೆ ಮೃತಪಟ್ಟಳು’ ಎಂದು ಎಸ್‌ಎಸ್‌ಪಿ ತಿಳಿಸಿದ್ದಾರೆ.

- Advertisement -

Latest News

error: Content is protected !!