Sunday, June 7, 2026
Homeತಾಜಾ ಸುದ್ದಿಮತ್ತೊಂದು ಅವಧಿಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಹೆಚ್.ಡಿ. ದೇವೇಗೌಡ ಅವಿರೋಧ ಆಯ್ಕೆ

ಮತ್ತೊಂದು ಅವಧಿಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಹೆಚ್.ಡಿ. ದೇವೇಗೌಡ ಅವಿರೋಧ ಆಯ್ಕೆ

- Advertisement -
- Advertisement -

ಬೆಂಗಳೂರು: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಮತ್ತೊಂದು ಅವಧಿಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಇಂದು ನಡೆದ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ದೇವೇಗೌಡರನ್ನು ಅವಿರೋಧವಾಗಿ ಆಯ್ಕೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ.

ಬೆಂಗಳೂರಿನಲ್ಲಿ ಜೆಡಿಎಸ್ ಮುಖ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮತ್ತು ನಾಳೆ ಎರಡು ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ

ಮಾಜಿ ಪ್ರಧಾನಿಗಳೇ ರಾಷ್ಟ್ರೀಯ ಅಧ್ಯಕ್ಷರಾಗಿ ಮರು ಆಯ್ಕೆ ಆಗಬೇಕು ಎಂದು ಎಲ್ಲಾ ರಾಜ್ಯ ಪ್ರತಿನಿಧಿಗಳು ಕಾರ್ಯಕಾರಿಣಿಯಲ್ಲಿ ಒಮ್ಮತ ಅಭಿಪ್ರಾಯ ವ್ಯಕ್ತಪಡಿಸಿದರು.

ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ 13 ರಾಜ್ಯಗಳ ಪ್ರತಿನಿಧಿಗಳು, ಕೇರಳದ ಮಾಜಿ ಸಚಿವರು, ಹಾಲಿ ಶಾಸಕರು ಸೇರಿ ವಿವಿಧ ರಾಜ್ಯಗಳ ಪ್ರತಿನಿಧಿಗಳು ಭಾಗಿಯಾಗಿದ್ದರು‌.

- Advertisement -

Latest News

error: Content is protected !!