Friday, June 5, 2026
Homeತಾಜಾ ಸುದ್ದಿಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಗೆ ಅನಾರೋಗ್ಯ:ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಗೆ ಅನಾರೋಗ್ಯ:ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು

- Advertisement -
- Advertisement -

ಬೆಂಗಳೂರು: ನಿರಂತರ ಪ್ರವಾಸ ಹಾಗೂ ಕಾರ್ಯಕ್ರಮಗಳ ಒತ್ತಡದಿಂದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವೈದ್ಯರ ಸಲಹೆಯ ಮೇರೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಕುಮಾರಸ್ವಾಮಿ ದಾಖಲಾಗಿದ್ದಾರೆ.

ಅವಿಶ್ರಾಂತವಾಗಿ ಪ್ರವಾಸ ಮಾಡಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಜ್ವರದಿಂದ ಬಳಲುತ್ತಿದ್ದು ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಹೆಚ್.ಡಿ. ಕುಮಾರಸ್ವಾಮಿ, ವಿಶ್ರಾಂತಿ ನಂತರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಈ ಬಗ್ಗೆ ಆತಂಕಕ್ಕೆ ಒಳಗಾಗುವುದು ಬೇಡ ಎಂದೂ ಮನವಿ ಮಾಡಿದ್ದಾರೆ.

- Advertisement -

Latest News

error: Content is protected !!