Monday, August 31, 2026
Homeತಾಜಾ ಸುದ್ದಿಚೆನ್ನೈಯ ಆಸ್ಪತ್ರೆಗೆ ದಾಖಲಾದ ಎಚ್.ಡಿ.ಕುಮಾರಸ್ವಾಮಿ

ಚೆನ್ನೈಯ ಆಸ್ಪತ್ರೆಗೆ ದಾಖಲಾದ ಎಚ್.ಡಿ.ಕುಮಾರಸ್ವಾಮಿ

- Advertisement -
- Advertisement -

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೃದಯ ಸಂಬಂಧಿ ಸಮಸ್ಯೆಯಿಂದ ಶಸ್ತ್ರಚಿಕಿತ್ಸೆಗಾಗಿ ಚೆನ್ನೈಯಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕುಮಾರಸ್ವಾಮಿ ಅವರು ಮಂಗಳವಾರದಂದು ಮಧ್ಯಾಹ್ನ ಚೆನ್ನೈಗೆ ತೆರಳಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೊಳಗಾಗಿದ್ದಾರೆ. ವೈದ್ಯರು ಆರೋಗ್ಯ ತಪಾಸಣೆ ನಡೆಸಿ ಕೆಲವು ಪರೀಕ್ಷೆಗಳನ್ನು ನಡೆಸಿದ್ದಾರೆ. ಇನ್ನು ಮಾ 21 ಗುರುವಾರದಂದು ಶಸ್ತ್ರಚಿಕಿತ್ಸೆ ನಡೆಸಲಾಗುತ್ತಿದ್ದು, ಬಳಿಕ ಮೂರ್ನಾಲ್ಕು ದಿನಗಳವರೆಗೆ ಆಸ್ಪತ್ರೆಯಲ್ಲಿಯೇ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ. 25ರಂದು ಬೆಂಗಳೂರಿಗೆ ಹಿಂತಿರುಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಮ್ಮ ಶಸ್ತ್ರಚಿಕಿತ್ಸೆ ಕುರಿತು ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಕುಮಾರಸ್ವಾಮಿ, ಹೃದಯ ಸಂಬಂಧಿ ಸಮಸ್ಯೆ ನನಗೆ ಹುಟ್ಟಿದ್ದಾಗಿನಿಂದಲೂ ಇದೆ. ಈ ಹಿನ್ನೆಲೆಯಲ್ಲಿ ಎರಡೂ ಬಾರಿ ಟಿಶೂ ವಾಲ್ಟ್ ಹಾಕಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಎರಡು ರೀತಿಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ. ಇಂದು ಟಿಶೂ ವಾಲ್ವ ಮತ್ತೊಂದು ಮೆಟಾಲಿಕ್ ವಾಲ್ಟ್ ಹಾಕಿ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ ಎಂದರು.

- Advertisement -

Latest News

error: Content is protected !!