Monday, May 20, 2024
Homeತಾಜಾ ಸುದ್ದಿಮೋದಿ ಭೇಟಿ ಖರ್ಚಿನಲ್ಲಿ ಒಂದು ಗ್ರಾಮ ಉದ್ಧಾರವಾಗ್ತಿತ್ತು: ಹೆಚ್‌.ಡಿ.ಕುಮಾರಸ್ವಾಮಿ ಆಕ್ರೋಶ

ಮೋದಿ ಭೇಟಿ ಖರ್ಚಿನಲ್ಲಿ ಒಂದು ಗ್ರಾಮ ಉದ್ಧಾರವಾಗ್ತಿತ್ತು: ಹೆಚ್‌.ಡಿ.ಕುಮಾರಸ್ವಾಮಿ ಆಕ್ರೋಶ

spot_img
- Advertisement -
- Advertisement -

ಹಾಸನ(ಜೂ.23): ಪ್ರಧಾನಿ ಮೋದಿ ರಾಜ್ಯಕ್ಕೆ ಬಂದು ಹೋಗಲು 32 ಕೋಟಿ ರು. ಖರ್ಚು ಮಾಡ್ತಾರೆ. ಅದೇ ಹಣದಲ್ಲಿ ಒಂದು ಗ್ರಾಮ ಉದ್ಧಾರ ಮಾಡಲು ಆಗುತ್ತಿರಲಿಲ್ವಾ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಕೊಮ್ಮಘಟ್ಟ ಸಭೆಯಲ್ಲಿ ಮಾತನಾಡುತ್ತಾ ಹಿಂದಿನ ಯಾವ ಸರ್ಕಾರವೂ ಏನು ಮಾಡಿಲ್ಲ ಎಂದಿದ್ದಾರೆ.

ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ನಾಡಿಗೆ ಕೊಡುಗೆ ಕೊಟ್ಟಿದ್ದನ್ನು ಸ್ಮರಿಸುವ ಬದಲು ಎಲ್ಲವನ್ನೂ ತಾವೇ ಮಾಡಿದ್ದು ಎನ್ನುವ ರೀತಿ ಮಾತನಾಡಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಮೊನ್ನೆ ಬೆಂಗಳೂರಿನಲ್ಲಿ 33 ಸಾವಿರ ಕೋಟಿ ಅನುದಾನದ ಕರ್ಯಕ್ರಮಕ್ಕೆ ಶಂಕುಸ್ಥಾಪನೆ ಮಾಡಿದ್ದೇವೆ ಎಂದು ಭಾಷಣ ಮಾಡಿದ್ದಾರೆ. ಇದರಲ್ಲಿ ಕೇವಲ ಮೋದಿಯವರ ಕೊಡುಗೆ ಮಾತ್ರ ಇದೆಯಾ? ಹಿಂದೆ ಇದ್ದ ಸರ್ಕಾರಗಳು ಹಾಕಿದ್ದ ಅಡಿಪಾಯಕ್ಕೆ ಮೋದಿ ಇಂದು ಶಂಕುಸ್ಥಾಪನೆ ಮಾಡಿದ್ದಾರೆ. ಇದರ ನಿಜವಾದ ಚಿಂತಕರು ದೇವೇಗೌಡರು ಎಂದರು. ಅವರು ಪ್ರಧಾನಿ ಆಗಿದ್ದಾಗಲೆ ಈ ಯೋಜನೆ ಬಗ್ಗೆ ಕನಸು ಕಂಡಿದ್ದರು ಎಂದು ತಿಳಿಸಿದರು.

- Advertisement -
spot_img

Latest News

error: Content is protected !!