Wednesday, May 8, 2024
Homeತಾಜಾ ಸುದ್ದಿವಿಶ್ವ ಹಿಂದೂ ಪರಿಷತ್‌, ಭಜರಂಗದಳದ ಒಂದು ರಾಜಕೀಯ ಪಕ್ಷದ ಬಾಲಂಗೋಚಿಗಳಷ್ಟೇ:  ಹಿಂದೂ ಸಂಘಟನೆಗಳ ವಿರುದ್ಧ ಮತ್ತೆ...

ವಿಶ್ವ ಹಿಂದೂ ಪರಿಷತ್‌, ಭಜರಂಗದಳದ ಒಂದು ರಾಜಕೀಯ ಪಕ್ಷದ ಬಾಲಂಗೋಚಿಗಳಷ್ಟೇ:  ಹಿಂದೂ ಸಂಘಟನೆಗಳ ವಿರುದ್ಧ ಮತ್ತೆ ಗುಡುಗಿದ‌ HDK

spot_img
- Advertisement -
- Advertisement -

ಬೆಂಗಳೂರು: ಹಲಾಲ್ ಕಟ್ ಮಾಂಸ ಖರೀದಿಸುವ ವಿಚಾರ ರಾಯಕೀಯ ನಾಯಕರಿಗೆ ಈಗ ಚರ್ಚೆ, ಸವಾಲಿನ ವಿಷಯವಾಗಿದೆ. ಹಲಾಲ್ ವಿಚಾರದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಗಂಡಸ್ತನದ ಸವಾಲು ಹಾಕಿದ್ರು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ. ಇದೀಗ ಮುಂದುವರೆಸಿ ಕುಮಾರಸ್ವಾಮಿ ಹಿಂದೂ ಸಂಘಟನೆಗಳ ವಿರುದ್ಧ ಟ್ವಿಟ್ಟರ್‌ ಮೂಲಕ ಗುಡುಗಿದ್ದಾರೆ.

ಕರಪತ್ರಗಳನ್ನು ಹಂಚಿ ಸಮಾಜ ಒಡೆಯುತ್ತಿರುವ ವಿಶ್ವ ಹಿಂದೂ ಪರಿಷತ್‌, ಭಜರಂಗದಳದ ಬಗ್ಗೆ ನನ್ನ ಹೇಳಿಕೆಯಲ್ಲಿ ಯಾವ ಬದಲಾವಣೆಯೂ ಇಲ್ಲ. ಧರ್ಮ-ಜಾತಿ ಆಧಾರದ ಮೇಲೆ ಜನರನ್ನು ವಿಘಟಿಸುವ ಇಂಥ ಸಂಘಟನೆಗಳ ಕಿಡಿಗೇಡಿಗಳ ಬಗ್ಗೆ ನನ್ನ ನಿಲುವು ಅಚಲ. ‘ಧರ್ಮೋದ್ಧಾರದ ಸೋಗಿನಲ್ಲಿ ಅಶಾಂತಿ’ ಸೃಷ್ಟಿಸುವ ಕೃತ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಟ್ವೀಟ್‌ ಮಾಡಿದ್ದಾರೆ.

ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ.ಇದು ವಿಶ್ವ ಹಿಂದೂ ಪರಿಷತ್‌, ಭಜರಂಗದಳದ ಜಹಗೀರಲ್ಲ. ಇವೇನು ಹಿಂದೂಗಳ ಪ್ರಾತಿನಿಧಿಕ ಸಂಸ್ಥೆಗಳೂ ಅಲ್ಲ. ಒಂದು ರಾಜಕೀಯ ಪಕ್ಷದ ಬಾಲಂಗೋಚಿಗಳಷ್ಟೇ. ಹಿಂದೂ, ಹಿಂದುತ್ವ ಎನ್ನುವ ಪರಂಪರೆ ಇವರ ಗುತ್ತಿಗೆಯಲ್ಲ. ಧರ್ಮೋ ರಕ್ಷತಿ ರಕ್ಷಿತಃʼ ಎನ್ನುವುದರ ಅರಿವು ನನಗೂ ಇದೆ. ಧರ್ಮ ರಕ್ಷಣೆ ಎಂದರೆ ಇನ್ನೊಬ್ಬರ ಅನ್ನ ಕಸಿಯುವುದಲ್ಲ? ನೆಮ್ಮದಿಯ ನಾಡಿಗೆ ಕಿಚ್ಚಿಡುವುದಲ್ಲ? ಮನಸ್ಸುಗಳನ್ನು ಒಡೆದು ದೇಶವನ್ನು ʼಒಡೆದ ಮಡಿಕೆʼ ಮಾಡುವುದಲ್ಲ. ದೇಶವೆಂದರೆ ಮಣ್ಣಲ್ಲ, ಮನುಷ್ಯರು ಎಂದು ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ.

- Advertisement -
spot_img

Latest News

error: Content is protected !!