Saturday, July 11, 2026
Homeತಾಜಾ ಸುದ್ದಿಪ್ರವೀಣ್‌ ನೆಟ್ಟಾರು ಹತ್ಯೆ: ಸರ್ಕಾರದ ವಿರುದ್ಧ ಹೆಚ್‌ಡಿಕೆ ಆಕ್ರೋಶ

ಪ್ರವೀಣ್‌ ನೆಟ್ಟಾರು ಹತ್ಯೆ: ಸರ್ಕಾರದ ವಿರುದ್ಧ ಹೆಚ್‌ಡಿಕೆ ಆಕ್ರೋಶ

- Advertisement -
- Advertisement -

ಬೆಂಗಳೂರು: ಪ್ರವೀಣ್‌ ನೆಟ್ಟಾರು ಹತ್ಯೆ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರದ ವಿರುದ್ಧವೇ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿಯೇ ಮುಂದುವರಿದಿದ್ದು, ಇನ್ನೊಂದು ಜೀವ ಹೋಗಿದೆ. ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ ಎಂದು ಕಿಡಿ ಕಾರಿದ್ದಾರೆ.

ಪ್ರತಿ ಕೊಲೆ ಅದ ಮೇಲೆಯೂ ಮೈ ಕೊಡವಿಕೊಂಡು ಎದ್ದೇಳುವ ಬಿಜೆಪಿ ಸರ್ಕಾರ, ಕೊಲೆಯೇ ಆಗದಂತೆ ತಡೆಯುವ ಪ್ರಯತ್ನ ಮಾಡುತ್ತಿಲ್ಲ, ಏಕೆ? ಕೊಲೆಗಳೆಂದರೆ ಕೆಲವರಿಗೇಕೆ ಇಷ್ಟೊಂದು ಇಷ್ಟ? ಚುನಾವಣೆ ಹತ್ತಿರ ಆದಂತೆಲ್ಲ ನೆತ್ತರ ಓಕುಳಿ ಹರಿಯುತ್ತಿದೆ! ಈ ನೆತ್ತರ ಮೇಲೆ ರಾಜಕೀಯ ಆಟ ವಿಜೃಂಭಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

- Advertisement -

Latest News

error: Content is protected !!