Saturday, April 27, 2024
Homeತಾಜಾ ಸುದ್ದಿಸ್ಪಂದನಾ ನಿಧನಕ್ಕೆ ಸಂತಾಪ ಸೂಚಿಸಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ

ಸ್ಪಂದನಾ ನಿಧನಕ್ಕೆ ಸಂತಾಪ ಸೂಚಿಸಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ

spot_img
- Advertisement -
- Advertisement -

ಬೆಂಗಳೂರು: ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ವಿಜಯ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ  ಮಾತನಾಡಿದ  ಅವರು; ಸ್ಪಂದನಾ ಅವರ ನಿಧನ ತೀವ್ರ ಆಘಾತ ಉಂಟಾಗಿದೆ. ನಟ ವಿಜಯ ರಾಘವೇಂದ್ರ ಅವರ ಧರ್ಮಪತ್ನಿ ಬ್ಯಾಂಕಾಕ್ ಪ್ರವಾಸದಲ್ಲಿ ಹೃದಯಾಘಾತಕ್ಕೆ ತುತ್ತಾಗಿರುವುದು ನೋವಿನ ಸಂಗತಿ . ಚಿಕ್ಕ ವಯಸ್ಸಿನಲ್ಲಿ ಆರೋಗ್ಯವಾಗಿ ಇದ್ದೋರು ಇಂತಹ ಸಾವು ಕಂಡಿರುವುದು ದುಃಖ ತಂದಿದೆ. ಅವರ ಕುಟುಂಬದವರಿಗೆ ಈ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಇನ್ನು ಈ ಬಗ್ಗೆ ಟ್ವೀಟ್ ಕೂಡ ಮಾಡಿದ್ದು ಚಿತ್ರನಟ ಶ್ರೀ ವಿಜಯ ರಾಘವೇಂದ್ರ ಅವರ ಧರ್ಮಪತ್ನಿ ಶ್ರೀಮತಿ ಸ್ಪಂದನಾ ಅವರು ಅಕಾಲಿಕ ಮರಣಕ್ಕೀಡಾಗಿರುವುದು ನನಗೆ ಅತೀವ ನೋವುಂಟು ಮಾಡಿದೆ.ಚಿಕ್ಕ ವಯಸ್ಸಿನಲ್ಲೇ ಅವರು ಅಗಲಿರುವುದು ಆಘಾತಕಾರಿ. ಆ ಭಗವಂತ ಸ್ಪಂದನಾರ ಆತ್ಮಕ್ಕೆ ಚಿರಶಾಂತಿ ನೀಡಲಿ. ಶ್ರೀ ವಿಜಯರಾಘವೇಂದ್ರ, ಮತ್ತವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದಿದ್ದಾರೆ.

- Advertisement -
spot_img

Latest News

error: Content is protected !!