Wednesday, June 3, 2026
Homeತಾಜಾ ಸುದ್ದಿಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಹೆಚ್ಡಿಕೆ ಅವಿರೋಧ ಆಯ್ಕೆ

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಹೆಚ್ಡಿಕೆ ಅವಿರೋಧ ಆಯ್ಕೆ

- Advertisement -
- Advertisement -

ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಹೆಚ್ಡಿಕೆ ಅವಿರೋಧ ಆಯ್ಕಾಗಿದ್ದಾರೆ. ಇಂದು ಚುನಾವಣಾ  ಸೋಲು ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚಿಸುವುದಕ್ಕಾಗಿ ಜೆಡಿಎಸ್ ಪಕ್ಷದಿಂದ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿತ್ತು. ಈ ಸಭೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಈ ಕುರಿತಂತೆ ಜೆಡಿಎಸ್ ಪಕ್ಷದಿಂದ ಅಧಿಕೃತವಾಗಿ ಮಾಹಿತಿಯನ್ನು ಬಿಡುಗಡೆ ಮಾಡಲಾಗಿದ್ದು, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಕುಮಾರಸ್ವಾಮಿ ಅವರನ್ನು ಅವಿರೋಧ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದೆ.

ಇಂದು ಜೆಡಿಎಸ್ ಪಕ್ಷದ ಶಾಸಕಾಂಗ ಸಭೆ ನಡೆಯಿತು. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ  ಸೇರಿದಂತೆ ಪಕ್ಷದ ಎಲ್ಲಾ 19 ಶಾಸಕರು ಹಾಜರಾಗಿದ್ದರು. ವಿಧಾನ ಪರಿಷತ್ ಸದಸ್ಯರೂ ಭಾಗಿಯಾಗಿದ್ದರು. ಈ ಸಭೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಅವಿರೋಧವಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರನ್ನು ಆಯ್ಕೆ ಮಾಡಿರುವುದಾಗಿ ಹೇಳಿದೆ.

- Advertisement -

Latest News

error: Content is protected !!