- Advertisement -
- Advertisement -
ಬೆಳ್ತಂಗಡಿ; ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದಾತನ ಬಂಧಿಸಿರುವ ಘಟನೆ ಬೆಳ್ತಂಗಡಿಯ ಕಕ್ಕಿಂಜೆಯಲ್ಲಿ ನಡೆದಿದೆ. ಚಿಬಿದ್ರೆ ಗ್ರಾಮದ ಮೊಹಮ್ಮದ್ ಮುಸ್ತಾಫಾ, (25) ಬಂಧಿತ.
ಆರೋಪಿ 28.09.2023 ರಂದು ಮದ್ಯಾಹ್ನ ಬೆಳ್ತಂಗಡಿ ತಾಲೂಕು ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಪೇಟೆಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾವನ್ನು ಸೇವನೆ ಮಾಡಿದ್ದನ್ನು, ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರು ಆತನನ್ನು ವಶಕ್ಕೆ ಪಡೆದು, ಆತನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿ, ನಿಷೇದಿತ ಮಾದಕ ವಸ್ತು ಗಾಂಜಾವನ್ನು ಸೇವನೆ ಮಾಡಿರುವುದು ದೃಢಪಟ್ಟಿರುತ್ತದೆ.
ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ: 72/2023 ಕಲಂ: 27(ಬಿ) ಎನ್ ಡಿಪಿಎಸ್ ಕಾಯಿದೆ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
- Advertisement -