Friday, July 11, 2025
Homeಕರಾವಳಿಮಂಗಳೂರುಮಂಗಳೂರು: ಲಂಚಕ್ಕೆ ಬೇಡಿಕೆ ಇಟ್ಟ ಹೆಡ್ ಕಾನ್ಸ್ಟೇಬಲ್ ಪೊಲೀಸ್ ಬಲೆಗೆ ಬಿದ್ದ ಪ್ರಕರಣ: 5 ಮಂದಿ...

ಮಂಗಳೂರು: ಲಂಚಕ್ಕೆ ಬೇಡಿಕೆ ಇಟ್ಟ ಹೆಡ್ ಕಾನ್ಸ್ಟೇಬಲ್ ಪೊಲೀಸ್ ಬಲೆಗೆ ಬಿದ್ದ ಪ್ರಕರಣ: 5 ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿದ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ

spot_img
- Advertisement -
- Advertisement -

ಮಂಗಳೂರು: ಲಂಚಕ್ಕೆ ಬೇಡಿಕೆ ಇಟ್ಟ ಹೆಡ್ ಕಾನ್ಸ್ಟೇಬಲ್ ಪೊಲೀಸ್ ಬಲೆಗೆ ಬಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 5 ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ತಸ್ಲಿಂಅಪಘಾತದ ಬಳಿಕ ಲೈಸೆನ್ಸ್ ಮರಳಿ ನೀಡಲು 50 ಸಾವಿರ ಲಂಚ ಬೇಡಿಕೆ ಇಟ್ಟು ಬಳಿಕ 5 ಸಾವಿರ ಲಂಚ ಪಡೆಯುವಾಗ ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಹೆಡ್ ಕಾನ್ಟೇಬಲ್ ತಸ್ಲೀಂ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಪೊಲೀಸ್ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆದೇಶಿಸಿದ್ದಾರೆ.
ಲಂಚದ ಬೇಡಿಕೆಯಿರಿಸಿದ ಪ್ರಕರಣದಲ್ಲಿ ತಸ್ಲೀಂ ಹಾಗೂ ಸಹಕರಿಸಿದ ವಿನೋದ್ ನೇರ ಆರೋಪಿಗಳಾಗಿದ್ದು, ಅವರನ್ನು ಅಮಾನತು ಮಾಡಲಾಗಿದೆ. ತಸ್ಲಿಂ ಮತ್ತು ವಿನೋದ್ ಅವರ ಲಂಚ ಬೇಡಿಕೆ ಬಗ್ಗೆ ಮಾಹಿತಿ ಗೊತ್ತಿದ್ದರೂ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡದೆ ಮೌನವಹಿಸಿದ್ದ ಇತರ ಮೂವರನ್ನೂ ಕೂಡಾ ಅಮಾನತುಗೊಳಿಸಲಾಗಿದೆ

- Advertisement -
spot_img

Latest News

error: Content is protected !!