Tuesday, May 21, 2024
Homeಪ್ರಮುಖ-ಸುದ್ದಿಯಡಿಯೂರಪ್ಪ ಅವರ ಕೊರೊನಾ ಸೋಂಕಿನ ಮೂಲ ಪತ್ತೆ ಹಚ್ಚೋದೇ ಆರೋಗ್ಯ ಇಲಾಖೆಗೆ ತಲೆನೋವು

ಯಡಿಯೂರಪ್ಪ ಅವರ ಕೊರೊನಾ ಸೋಂಕಿನ ಮೂಲ ಪತ್ತೆ ಹಚ್ಚೋದೇ ಆರೋಗ್ಯ ಇಲಾಖೆಗೆ ತಲೆನೋವು

spot_img
- Advertisement -
- Advertisement -

ಬೆಂಗಳೂರು : ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ನಿನ್ನೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಲ್ಲಿ ಕೊರೊನಾವೈರಸ್ ಸೋಂಕಿನ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಮುಖ್ಯಮಂತ್ರಿಗಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಆದರೂ ಆರೋಗ್ಯ ಇಲಾಖೆಗೆ ಹೊಸ ಸಮಸ್ಯೆ ಶುರುವಾಗಿದೆ.

ಕೊರೊನಾ ವೈರಸ್ ಸೋಂಕು ತಡೆಯಲು ಕಟ್ಟುನಿಟ್ಟಿನ ಮುನ್ನೆಚ್ಚರಿಕೆಯನ್ನು ಸಿಎಂ ಯಡಿಯೂರಪ್ಪ ಅವರು ತೆಗೆದುಕೊಂಡಿದ್ದರು. ಜೊತೆಗೆ ಯಾವುದೇ ಕಾರ್ಯಕ್ರಮಕ್ಕೆ ಹೋದರೂ ಮಾಸ್ಕ್ ಧರಿಸಿರುತ್ತಿದ್ದರು. ಅದರೊಂದಿಗೆ ಕಡ್ಡಾಯವಾಗಿ ಸಾಮಾಜಿಕ ಅಂತರವನ್ನೂ ಕಾಯ್ದುಕೊಂಡಿದ್ದರು. ಆದರೂ ಸಿಎಂ ಅವರಿಗೆ ಕೋವಿಡ್ ಸೋಂಕು ತಗುಲಿರುವುದರ ಮೂಲ ಪತ್ತೆ ಹಚ್ಚುವುದು ರಾಜ್ಯ ಆರೋಗ್ಯ ಇಲಾಖೆಗೆ ತಲೆನೋವಾಗಿದೆ.

ಎಲ್ಲ ಮುಂಜಾಗ್ರತಾ ಕ್ರಮಗಳನ್ನೂ ಕೈಗೊಂಡಿದ್ದರೂ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹೇಗೆ ಕೊರೊನಾ ವೈರಸ್ ಸೋಂಕು ತಗುಲಿದೆ ಎಂಬುದು ಆರೋಗ್ಯ ಇಲಾಖೆಗೆ ತಲೆನೋವಾಗಿದೆ. ಜೊತೆಗೆ ಸೋಂಕಿನ ಮೂಲ ಪತ್ತೆಹಚ್ಚಲು ಆರೋಗ್ಯ ಇಲಾಖೆ ಪರದಾಡುತ್ತಿದೆ.

- Advertisement -
spot_img

Latest News

error: Content is protected !!