Tuesday, May 14, 2024
Homeತಾಜಾ ಸುದ್ದಿರಾಜ್ಯದಲ್ಲಿ ಬಿಸಿಲ ಬೇಗೆಗೆ ತತ್ತರಿಸಿದ ಜನ; ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ರಾಜ್ಯದಲ್ಲಿ ಬಿಸಿಲ ಬೇಗೆಗೆ ತತ್ತರಿಸಿದ ಜನ; ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

spot_img
- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿ ಬಿಸಿಲ ಬೇಗೆಗೆ ಜನ ತತ್ತರಿಸಿ ಹೋಗಿದ್ದಾರೆ.  ದಿನೇ ದಿನೇ ಹೆಚ್ಚುತ್ತಿರುವ ತಾಪಮಾನದಿಂದಾಗಿ ಸಾಕಷ್ಟು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವ ಅಪಾಯ ಇರೋದರಿಂದ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.

ಆರೋಗ್ಯ ಇಲಾಖೆಯ ಮಾರ್ಗಸೂಚಿಯ ಪ್ರಕಾರ, ನವಜಾತ ಶಿಶುಗಳು, ಪುಟ್ಟ ಮಕ್ಕಳು, ಗರ್ಭಿಣಿಯರು, ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು, ಮಾನಸಿಕ ಸಮಸ್ಯೆಗಳಿರುವವರು, ವಿಶೇಷವಾಗಿ ಹೃದ್ರೋಗ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿರುವವರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದೆ.

ಜನ ಆರೋಗ್ಯ ಕಾಪಾಡಿಕೊಳ್ಳಲು ಏನು ಮಾಡಬೇಕು?

ಉಷ್ಣ ಮಾರುತದಿಂದ ರಕ್ಷಿಸಿಕೊಳ್ಳಲು ಹೆಚ್ಚು ನೀರು ಕುಡಿಯಬೇಕು

ನಿಂಬೆ ಹಣ್ಣಿನ ಷರಬತ್ತು, ಮಜ್ಜಿಗೆ, ಲಸ್ಸಿ, ಹಣ್ಣಿನ ಜ್ಯೂಸ್ ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸಬೇಕು.

ನೀರಿನ ಅಂಶ ಹೆಚ್ಚಿರುವ ಕಲ್ಲಂಗಡಿ, ಕರಬೂಜ,ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಎಳೆನೀರು ಸೇವಿಸಬೇಕು.

ತಿಳಿಬಣ್ಣದ, ಮೈಗೆ ಅಂಟದ ಹತ್ತಿಬಟ್ಟೆ ಧರಿಸಬೇಕು. ನೆರಳಿಗೆ ಟೋಪಿ, ಛತ್ರಿಗಳನ್ನು ಇಟ್ಟುಕೊಳ್ಳಬೇಕು.

ಈ ತಪ್ಪುಗಳನ್ನು ಮಾಡಬೇಡಿ

ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೊರಹೋಗುವುದನ್ನು ತಪ್ಪಿಸಬೇಕು.

ಮಧ್ಯಾಹ್ನದ ಸಂದರ್ಭದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಕೆಗಳನ್ನು ಕೈಗೊಳ್ಳಬಾರದು.

ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಿ

ಮಧ್ಯಾನ್ಹದ ಸಮಯದಲ್ಲಿ ಅಡುಗೆ ಮಾಡುವುದು ತಪ್ಪಿಸಿ, ಅಡುಗೆ ಸಿದ್ಧಪಡಿಸುವ ಪ್ರದೇಶದಲ್ಲ ಕಿಟಕಿ ಹಾಗೂ ಬಾಗಿಲುಗಳನ್ನು ತೆರೆಯಬೇಕು.

ಮಧ್ಯಪಾನ, ಕಾಫಿ ಮತ್ತು ಕಾರ್ಬೊನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಿಂದ ದೂರವಿರಬೇಕು.ಇಂತಹ ಪಾನೀಯಗಳು ದೇಹವನ್ನು ರ್ನಿಚಕರಣಗೊಳಿಸುತ್ತವೆ ಅಥವಾ ಹೊಟ್ಟೆ ನೋವನ್ನು ಉಂಟುಮಾಡುತ್ತವೆ.

ಶ್ರಮದಾಯಕ ಹಾಗೂ ಹೊರಾಂಗಣ ಚಟುವಟಕೆಗಳನ್ನು ತಾಪಮಾನವು ಕಡಿಮೆ ಇರುವ ಸಮಯದಲ್ಲಿ ಅಂದರೆ, ಬೆಳಗಿನ ಅಥವಾ ಸಂಜೆಯ ವೇಳೆ ಮಾಡಿ ಎಂದು ಹೇಳಿದೆ.

- Advertisement -
spot_img

Latest News

error: Content is protected !!