Sunday, April 28, 2024
Homeತಾಜಾ ಸುದ್ದಿಕೇರಳದಲ್ಲಿ ಜೆಎನ್ 1 ಸೋಂಕು ಹೆಚ್ಚಳ ಹಿನ್ನೆಲೆ; ಆರೋಗ್ಯ ಇಲಾಖೆಯಿಂದಕೋವಿಡ್ ಸಾರ್ವಜನಿಕ ಮಾರ್ಗಸೂಚಿ ಬಿಡುಗಡೆ

ಕೇರಳದಲ್ಲಿ ಜೆಎನ್ 1 ಸೋಂಕು ಹೆಚ್ಚಳ ಹಿನ್ನೆಲೆ; ಆರೋಗ್ಯ ಇಲಾಖೆಯಿಂದಕೋವಿಡ್ ಸಾರ್ವಜನಿಕ ಮಾರ್ಗಸೂಚಿ ಬಿಡುಗಡೆ

spot_img
- Advertisement -
- Advertisement -

ಬೆಂಗಳೂರು: ಕೇರಳದಲ್ಲಿ ಕೋವಿಡ್ ರೂಪಾಂತರಿ ಜೆಎನ್ 1 ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಎರಡು ಪ್ರತ್ಯೇಕವಾದ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಕೋವಿಡ್ ಸರ್ವೇಕ್ಷಣೆ ಹಾಗೂ ಮೇಲುಸ್ತುವಾರಿ ಕೈಗೊಳ್ಳುವ ನಿಟ್ಟಿನಲ್ಲಿ ಸುತ್ತೋಲೆ ಹೊರಡಿಸಿದ್ದು, ಮತ್ತೊಂದು ಸಾರ್ವಜನಿಕ ಸಲಹಾ ಮಾರ್ಗಸೂಚಿ ಹೊರಡಿಸಿದೆ.

ಎಲ್ಲಾ 60 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು, ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ವಿಶೇಷವಾಗಿ ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳಿಂದ ಬಳಲುತ್ತಿರುವವರು, ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು

ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳದಿರುವಂತೆ ಸೂಚಿಸಲಾಗಿದೆ.

ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು ಮತ್ತು ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸಬೇಕು

ಉತ್ತಮ ವೈಯಕ್ತಿಕ ಸ್ವಚ್ಛತೆ, ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು ಇತ್ಯಾದಿಗಳ ಪಾಲನೆಯು ಅಗತ್ಯವಾಗಿದೆ.

ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ, ಮನೆಯಲ್ಲಿರುವುದು ಸೂಕ್ತವಾಗಿದ್ದು, ಇತರ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ಹಿರಿಯ ನಾಗರೀಕರನ್ನು ಅವಶ್ಯವಿದ್ದಲ್ಲಿ ಮಾತ್ರವೇ ಭೇಟಿ ಮಾಡುವುದು ಸೂಕ್ತವಾಗಿದೆ.

ಆರೋಗ್ಯ ಸಮಸ್ಯೆಗಳನ್ನು ಹೊಂದಿದವರು, ಜನಸಂದಣಿಯ ಪ್ರದೇಶಗಳಿಗೆ ಭೇಟಿ ನೀಡಬೇಕಾದ ಸಂದರ್ಭದಲ್ಲಿ ಮಾಸ್ಕ್ ಧರಿಸುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ.

ಅಂತರ ರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು, ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ ಧರಿಸುವುದು ಸೂಕ್ತವಾಗಿದೆ.

- Advertisement -
spot_img

Latest News

error: Content is protected !!