Wednesday, October 14, 2026
Homeತಾಜಾ ಸುದ್ದಿಡಯಾಲಿಸಿಸ್ ಕೇಂದ್ರಗಳ ಸಿಬ್ಬಂದಿ ಪ್ರತಿಭಟನೆ ಹಿನ್ನೆಲೆ: ಸಂಜೀವಿನಿ ಸಂಸ್ಥೆಯ ಪ್ರತಿನಿಧಿಗಳ ಜೊತೆ ಆರೋಗ್ಯ ಸಚಿವರ ಸಭೆ

ಡಯಾಲಿಸಿಸ್ ಕೇಂದ್ರಗಳ ಸಿಬ್ಬಂದಿ ಪ್ರತಿಭಟನೆ ಹಿನ್ನೆಲೆ: ಸಂಜೀವಿನಿ ಸಂಸ್ಥೆಯ ಪ್ರತಿನಿಧಿಗಳ ಜೊತೆ ಆರೋಗ್ಯ ಸಚಿವರ ಸಭೆ

- Advertisement -
- Advertisement -

ಬೆಂಗಳೂರು: ರಾಜ್ಯದ ವಿವಿಧ ಡಯಾಲಿಸಿಸ್ ಕೇಂದ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ತಂತ್ರಜ್ಞರು ಮತ್ತು ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್ ಸಭೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು, ಸಿಬ್ಬಂದಿ ಪ್ರತಿನಿಧಿಗಳು ಮತ್ತು ಸಂಜೀವಿನಿ ಸಂಸ್ಥೆ ಪ್ರತಿನಿಧಿಗಳ ಜೊತೆ ಆರೋಗ್ಯ ಸಚಿವರು ಚರ್ಚೆ ನಡೆಸಿದ್ದಾರೆ.

ಪ್ರತಿಭಟನಾ ನಿರತರ ಬೇಡಿಕೆಗಳ ಈಡೇರಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರೆತ ಹಿನ್ನೆಲೆಯಲ್ಲಿ ಮುಷ್ಕರ ಹಿಂತೆಗೆದುಕೊಳ್ಳುವುದಾಗಿ ಸಿಬ್ಬಂದಿ ಪ್ರತಿನಿಧಿಗಳು ಪ್ರಕಟಿಸಿದ್ದಾರೆ.

- Advertisement -

Latest News

error: Content is protected !!