- Advertisement -


- Advertisement -
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಕಳೆದ 10 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ವಿರುದ್ಧ ಆರೋಗ್ಯ ಸಚಿವ ಯು.ಟಿ. ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಆಶಾ ಕಾರ್ಯಕರ್ತೆಯರ ಸೇವೆ ಇಲ್ಲದಿದ್ದರೂ ಆರೋಗ್ಯ ಇಲಾಖೆ ಕಾರ್ಯನಿರ್ವಹಿಸುತ್ತದೆ. 10 ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದರೂ ಆರೋಗ್ಯ ಇಲಾಖೆಯ ಕೆಲಸಕ್ಕೆ ತೊಂದರೆಯಾಗಿದೆಯೇ? ಗ್ರಾಮೀಣ ಭಾಗಗಳಲ್ಲಿ ಯಾವುದೇ ಸಮಸ್ಯೆ ಉಂಟಾಗಿದೆಯೇ ಎಂದು ಪ್ರಶ್ನಿಸುವ ಮೂಲಕ ಸಚಿವರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
- Advertisement -


