Sunday, May 5, 2024
Homeಪ್ರಮುಖ-ಸುದ್ದಿಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಕೊರೊನಾ ಪಾಸಿಟಿವ್, ಸರ್ಕಾರಿ ಆಸ್ಪತ್ರೆಗೆ ದಾಖಲಾದ ಸಚಿವರು

ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಕೊರೊನಾ ಪಾಸಿಟಿವ್, ಸರ್ಕಾರಿ ಆಸ್ಪತ್ರೆಗೆ ದಾಖಲಾದ ಸಚಿವರು

spot_img
- Advertisement -
- Advertisement -

ಬೆಂಗಳೂರು : ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಮಾಜಿ ಸಿದ್ದರಾಮಯ್ಯ ಅವರಿಗೆ ಕೊರೊನಾ ಪಾಸಿಟಿವ್ ಆಗಿ ಇಬ್ಬರು ನಾಯಕರು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರಿಗೂ ಕೋವಿಡ್ ಸೋಂಕು ತಗುಲಿರೋದು ದೃಢಪಟ್ಟಿದೆ.

ಈ ಬಗ್ಗೆ ಫೇಸ್ ಬುಕ್ ನಲ್ಲಿ ಮಾಹಿತಿ ನೀಡಿರುವ ಶ್ರೀರಾಮುಲು ಅವರು,” ಕೊರೊನ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ, ಬೆಂಗಳೂರಿನ ಶಿವಾಜಿನಗರದಲ್ಲಿರುವ ಸರ್ಕಾರಿ ಸ್ವಾಮ್ಯದ ಬೋರಿಂಗ್ ಆಸ್ಪತ್ರೆಗೆ ದಾಖಲಾಗಿದ್ದೇನೆ. ಶೀಘ್ರ ಗುಣಮುಖನಾಗಿ ಬರುವ ವಿಶ್ವಾಸವಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ” ಎಂದು ತಿಳಿಸಿದ್ದಾರೆ.

ಇನ್ನು ಸಿಎಂ ಹಾಗೂ ಮಾಜಿ ಸಿಎಂ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಜನ ಸಾಮಾನ್ಯರು ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್ ಗಳಿಲ್ಲದೇ ಪರದಾಡುತ್ತಿದ್ದಾರೆ. ಆದರೆ ರಾಜಕಾರಣಿಗಳು ಹೈ ಫೈ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜನ ಆಕ್ರೋಶ ಹೊರ ಹಾಕಿದ್ರು . ಆದರೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಮಾತ್ರ ಈ ವಿಚಾರದಲ್ಲಿ ಮಾದರಿಯಾಗಿದ್ದಾರೆ. ಸಚಿವರ ಈ ನಡೆಗೆ ಎಲ್ಲಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಕೊರೊನ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ, ಬೆಂಗಳೂರಿನ ಶಿವಾಜಿನಗರದಲ್ಲಿರುವ ಸರ್ಕಾರಿ ಸ್ವಾಮ್ಯದ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದೇನೆ.ಶೀಘ್ರ ಗುಣಮುಖನಾಗಿ ಬರುವ ವಿಶ್ವಾಸವಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ.

Posted by B Sriramulu on Sunday, 9 August 2020

- Advertisement -
spot_img

Latest News

error: Content is protected !!