Friday, November 27, 2026
Homeಕರಾವಳಿಉಡುಪಿಆಶಾ ಕಾರ್ಯಕರ್ತೆಯರು ಇಲ್ಲದಿದ್ದರೂ ಆರೋಗ್ಯ ಇಲಾಖೆ ನಡೆಯುತ್ತೆ ಎಂಬ ಆರೋಗ್ಯ ಸಚಿವರ ಹೇಳಿಕೆ ಖಂಡನೀಯ; ತೀವ್ರ...

ಆಶಾ ಕಾರ್ಯಕರ್ತೆಯರು ಇಲ್ಲದಿದ್ದರೂ ಆರೋಗ್ಯ ಇಲಾಖೆ ನಡೆಯುತ್ತೆ ಎಂಬ ಆರೋಗ್ಯ ಸಚಿವರ ಹೇಳಿಕೆ ಖಂಡನೀಯ; ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ

- Advertisement -
- Advertisement -

ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನೆ 11ನೇ ದಿನಕ್ಕೆ ಕಾಲಿಟ್ಟಿದ್ದು, ರಾಜ್ಯ ಸರ್ಕಾರದ ನಡೆಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಶಾ ಕಾರ್ಯಕರ್ತೆಯರು ಇಲ್ಲದಿದ್ದರೂ ಆರೋಗ್ಯ ಇಲಾಖೆ ನಡೆಯುತ್ತದೆ ಎಂಬ ಆರೋಗ್ಯ ಸಚಿವರ ಹೇಳಿಕೆಯನ್ನು ಖಂಡಿಸಿದ ಅವರು, ಇಂತಹ ಹೇಳಿಕೆಗಳು ಖಂಡನೀಯ. ಆಶಾ ಕಾರ್ಯಕರ್ತೆಯರು ಕೆಲಸ ಮಾಡುತ್ತಿಲ್ಲ ಎಂದು ಹೇಳುವುದು ಘೋರ ಅಪರಾಧ. ಮುಖ್ಯಮಂತ್ರಿಗಳು ಕೂಡಲೇ ಪ್ರತಿಭಟನಾ ನಿರತ ಆಶಾ ಕಾರ್ಯಕರ್ತೆಯರನ್ನು ಕರೆದು ಮಾತುಕತೆ ನಡೆಸಬೇಕು. ಅವರ ಬೇಡಿಕೆಗಳು ಕನಿಷ್ಠ ಮಟ್ಟದಲ್ಲಿದ್ದು, ರಾಜ್ಯ ಸರ್ಕಾರ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದ್ದಾರೆ.

ಚುನಾವಣಾ ಪ್ರಣಾಳಿಕೆಯಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನವನ್ನು ದುಪ್ಪಟ್ಟು ಮಾಡುವ ಭರವಸೆ ನೀಡಿದ್ದು ಯಾರು? ಆಗ ಕೇಂದ್ರ ಸರ್ಕಾರ ನೆನಪಾಗಿರಲಿಲ್ಲವೇ ಎಂದು ಪ್ರಶ್ನಿಸಿದ ಕೋಟ ಶ್ರೀನಿವಾಸ ಪೂಜಾರಿ, ಹೋರಾಟ ನಿರತ ಆಶಾ ಕಾರ್ಯಕರ್ತೆಯರ ಬೆಂಬಲಕ್ಕೆ ನಾವೆಲ್ಲರೂ ಇದ್ದೇವೆ ಎಂದು ಭರವಸೆ ನೀಡಿದ್ದಾರೆ.

- Advertisement -

Latest News

error: Content is protected !!