Thursday, May 2, 2024
Homeಕರಾವಳಿಮಂಗಳೂರುಮಂಗಳೂರು; ಬೊಂಡ ಫ್ಯಾಕ್ಟರಿಯ ಎಳನೀರು ಕುಡಿದು ತುಂಬೆ ಪರಿಸರದ ನಿವಾಸಿಗಳು ಅಸ್ವಸ್ಥ ಆರೋಪ; ಬೊಂಡ ಫ್ಯಾಕ್ಟರಿಗೆ...

ಮಂಗಳೂರು; ಬೊಂಡ ಫ್ಯಾಕ್ಟರಿಯ ಎಳನೀರು ಕುಡಿದು ತುಂಬೆ ಪರಿಸರದ ನಿವಾಸಿಗಳು ಅಸ್ವಸ್ಥ ಆರೋಪ; ಬೊಂಡ ಫ್ಯಾಕ್ಟರಿಗೆ ಆರೋಗ್ಯಾಧಿಕಾರಿಗಳು ಭೇಟಿ

spot_img
- Advertisement -
- Advertisement -

ಮಂಗಳೂರು; ಬೊಂಡ ಫ್ಯಾಕ್ಟರಿಯ ಎಳನೀರು ಕುಡಿದು ತುಂಬೆ ಪರಿಸರದ ನಿವಾಸಿಗಳು ಅಸ್ವಸ್ಥ ಆರೋಪ ಹಿನ್ನೆಲೆ ಬೊಂಡ ಪ್ಯಾಕ್ಟರಿಗೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಅಡ್ಯಾರ್ ನಲ್ಲಿರುವ ನ್ಯಾಚುರಲ್ಸ್ ಐಸ್ ಕ್ರೀಂ ಸಂಸ್ಥೆ ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ತುಂಬೆ ಪರಿಸರದ ನಿವಾಸಿಗಳು ಅಸ್ವಸ್ಥರಾದ ಘಟನೆ ನಡೆದಿತ್ತು.  ಇದೀಗ ಬೊಂಡ ಪ್ಯಾಕ್ಟರಿಗೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಎಳನೀರು ಸ್ಯಾಂಪಲ್ ನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.ಎಪ್ರಿಲ್ 8 ರಂದು ಅಡ್ಯಾರ್ ನಲ್ಲಿರುವ ಲ್ಯಾಂಡ್ಸ್ ಫ್ಲೆವರ್ ಸಂಸ್ಥೆಯ ಬೊಂಡ ಫ್ಯಾಕ್ಟರಿ ಎಂಬ ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಮ್ ಮಾರಾಟ ಮಾಡುವ ಸಂಸ್ಥೆಯಿಂದ ಅಡ್ಯಾರ್ ಕಣ್ಣೂರು ಮತ್ತು ತುಂಬೆ ಪರಿಸರದ ನಿವಾಸಿಗಳು ಎಳನೀರನ್ನು ಲೀಟರ್ ಲೆಕ್ಕದಲ್ಲಿ ಖರೀದಿಸಿ ಕುಡಿದ ಕಾರಣ ದಿನಾಂಕ 9.4.2024 ರಂದು ಬೆಳಗ್ಗೆಯಿಂದ ಸಂಜೆಯ ತನಕ ವಾಂತಿ ಮತ್ತು ಭೇದಿಯಿಂದ ಬಳಲಿರುತ್ತಾರೆ. ಇದರಿಂದ ಉತ್ಪಾದನೆಯಾಗುವ ಎಳನೀರನ್ನು ಸಾರ್ವಜನಿಕರಿಗೆ ಲೀಟರ್ ಗೆ 40 ರೂಪಾಯಿಯಂತೆ ಸೋಮವಾರ ಸಂಜೆ ಈ ಎಳನೀರನ್ನು ಕುಡಿದ ಅಡ್ಯಾರು ಮತ್ತು ಕಣ್ಣೂರ್ ಸುತ್ತಮುತ್ತಲಿನ ಸಾರ್ವಜನಿಕರು ಮಂಗಳವಾರದಿಂದ ವಾಂತಿಬೇದಿಯಿಂದ ಬಳಲಿದ್ದು ಸ್ಥಳೀಯ ವೈದ್ಯರುಗಳಲ್ಲಿ ಪರೀಕ್ಷಿಸಿ ಔಷಧೋಪಚಾರ ಪಡೆದು ಗುಣಮುಖರಾಗದೆ ಮೂರು ಮಂದಿ ಪಲ್ನೀರ್ ನಲ್ಲಿರುವ ಹೈ ಲ್ಯಾಂಡ್ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತಿದ್ದಾರೆ.ಅವರ ಆರೋಗ್ಯ ಸ್ಥಿರವಾಗಿದೆ.ಉಳಿದ 12 ಮಂದಿ ತುಂಬೆಯಲ್ಲಿರುವ ಫಾದರ್ ಮುಲ್ಲರ್ ಆಸ್ಪತ್ರೆ ಮುಂತಾದ ಕಡೆ ಹೊರರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ.


ಬುಧವಾರದಂದು ಈ ಬಗ್ಗೆ ಜಿಲ್ಲಾ ಆರೋಗ್ಯ ಅಧಿಕಾರಿ ಹಾಗೂ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಇವರಿಗೆ ವಾಟ್ಸಪ್ ಮುಖಾಂತರ ದೂರು ಸಲ್ಲಿಕೆಯಾಗಿದ್ದು ತಕ್ಷಣವೇ ಇವರಿಬ್ಬರೂ ಅಡ್ಯಾರ್ ನಲ್ಲಿರುವ ಬೊಂಡ ಫ್ಯಾಕ್ಟರಿ ಇಲ್ಲಿಗೆ ಭೇಟಿ ನೀಡಿ ಎಳನೀರಿನ ಸ್ಯಾಂಪಲನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ವಿಶ್ಲೇಷಣೆಗೆ ಕಳುಹಿಸಲು ಕ್ರಮ ಕೈಗೊಳ್ಳಲಾಗಿದೆ.

ಇಡೀ ಫ್ಯಾಕ್ಟರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ ಶುಚಿಗೊಳಿಸಲಾಗಿದೆ. ಪಲ್ನೀರ್ ನಲ್ಲಿರುವ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಒಳರೋಗಿ ಯಾಗಿ ದಾಖಲೆ ಯಾಗಿರುವ ಸಂತ್ರಸ್ತರನ್ನು ಭೇಟಿ ಮಾಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದು ವ್ಯದ್ಯರೊಂದಿಗೆ ಚರ್ಚೆಮಾಡಲಾಯಿತು. ಜಿಲ್ಲಾ ಆರೋಗ್ಯ ಅಧಿಕಾರಿ, ಆಹಾರ ಸುರಕ್ಷತಾ ಅಂಕಿತ ಅಧಿಕಾರಿ, ತಾಲೂಕು ಆರೋಗ್ಯ ಅಧಿಕಾರಿ ಇವರ ತಂಡ ಭೇಟಿ ನೀಡಿ ಸಾರ್ವಜನಿಕರ ಆರೋಗ್ಯ ಕಾಪಾಡಲು ಎಲ್ಲಾ ಕ್ರಮಗಳನ್ನು ಕೈಗೊಂಡಿರುತ್ತಾರೆ.

- Advertisement -
spot_img

Latest News

error: Content is protected !!