Tuesday, May 14, 2024
Homeತಾಜಾ ಸುದ್ದಿದಾವಣಗೆರೆ: ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥ

ದಾವಣಗೆರೆ: ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥ

spot_img
- Advertisement -
- Advertisement -

ದಾವಣಗೆರೆ: ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೆಬೆನ್ನೂರಿನಲ್ಲಿ ನಡೆದಿದೆ.

ರಂಜಾನ್ ಹಬ್ಬದ ಹಿನ್ನೆಲೆ ಉಪವಾಸ ಇದ್ದ ಮಕ್ಕಳು, ಉಪವಾಸ ಅಂತ್ಯ ಮಾಡಿ ಜಾಮೀಯಾ ಮಸೀದಿ ಬಳಿ ಪಾನಿಪೂರಿ ಸೇವನೆ ಮಾಡಿದ್ದಾರೆ ಎನ್ನಲಾಗಿದೆ.ಬಳಿಕ ಪಾನಿಪೂರಿ ಸೇವನೆ ಮಾಡಿದ ಬಳಿಕ ಮಕ್ಕಳ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ.

ಇನ್ನೂ ಮಕ್ಕಳ ಆರೋಗ್ಯದಲ್ಲಿ ಏರುಪೇರು ಉಂಟಾದ ಬಳಿಕ ಎಲ್ಲರನ್ನೂ ದಾವಣಗೆರೆ ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.‌ ಇನ್ನು ಮಾಹಿತಿ ತಿಳಿದು ಹರಿಹರ ತಹಶೀಲ್ದಾರ್ ಗುರು ಬಸವರಾಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಘಟನೆ ನಡೆಯುತ್ತಿದ್ದಂತೆ ಪಾನಿಪುರಿವಾಲಾ ಅಂಗಡಿ ಬಿಟ್ಟು ಎಸ್ಕೇಪ್ ಆಗಿದ್ದಾನೆ ಎನ್ನಲಾಗಿದೆ. ಘಟನೆ ಬಗ್ಗೆ  ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!