Saturday, June 6, 2026
Homeತಾಜಾ ಸುದ್ದಿನಟ ದರ್ಶನ್ ರಿಟ್ ಅರ್ಜಿಯ ವಿಚಾರಣೆ ನಾಳೆಗೆ ಮುಂದೂಡಿಕೆ

ನಟ ದರ್ಶನ್ ರಿಟ್ ಅರ್ಜಿಯ ವಿಚಾರಣೆ ನಾಳೆಗೆ ಮುಂದೂಡಿಕೆ

- Advertisement -
- Advertisement -

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರ ರಿಟ್ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಾಳೆಗೆ ಮುಂದೂಡಿಕೆ ಮಾಡಿದೆ.

ನಟ ದರ್ಶನ್ ಅವರ ಪರವಾಗಿ ಅವರ ವಕೀಲರು ದರ್ಶನ್ ಅವರಿಗೆ ಜೈಲು ಊಟ ಸೇರುತ್ತಿಲ್ಲ. ಇದರಿಂದ ಆರೋಗ್ಯದಲ್ಲಿ ಏರುಪೇರಾಗಿದೆ. ಹಾಗಾಗಿ  ಮನೆಯ ಊಟ, ಪುಸ್ತಕ, ಮಲಗಲು ಹಾಸಿಗೆ ಒದಗಿಸಲು ಜೈಲಾಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್ ಗೆ  ರಿಟ್ ಅರ್ಜಿ ಸಲ್ಲಿಸಿದ್ದರು.

ಅರ್ಜಿ ಕುರಿತಂತೆ ಇಂದು ವಿಚಾರಣೆ ನಡೆಸಿದ ನ್ಯಾಯಾಧೀಶರು ನಾಳೆ ಮಧ್ಯಾಹ್ನ 2 ಗಂಟೆಗೆ ವಿಚಾರಣೆ ಮುಂದೂಡಿದರು.ಇನ್ನು ದರ್ಶನ್ ಸಲ್ಲಿಸಿರುವ ಮನವಿಗೆ ಸರ್ಕಾರ ಹಾಗೂ ತನಿಖಾಧಿಕಾರಿ ಆಕ್ಷೇಪಣೆ ಸಲ್ಲಿಸಿದ್ದಾರೆ.ಆದರೆ ದರ್ಶನ್ ಪರ ಹಿರಿಯ ವಕೀಲ ಕೆಎನ್ ಫಣಿಂದ್ರ ವಾದ ಮಂಡಿಸಿ ದರ್ಶನ್ ಅರ್ಜಿಗೆ ಸರ್ಕಾರ ಆಕ್ಷೇಪಣೆ ಸಲ್ಲಿಸಬಹುದು . ಆದರೆ ತನಿಖಾಧಿಕಾರಿ ಸಲ್ಲಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಈ ವೇಳೆ ನ್ಯಾಯಾದೀಶರು ನಾಳೆ ಮಧ್ಯಾಹ್ನ 2:30 ಕ್ಕೆ ಅರ್ಜಿ ವಿಚಾರಣೆ ಮುಂದೂಡಿದ್ದಾರೆ.

- Advertisement -

Latest News

error: Content is protected !!