ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಪಾಲಾಗಿರುವ ನಟ ದರ್ಶನ್ ಅವರಿಗೆ ಸದ್ಯಕ್ಕಂತೂ ಬಿಡುಗಡೆ ಭಾಗ್ಯವಿಲ್ಲ. ಸೆಪ್ಟಂಬರ್ 21 ರಂದು ದರ್ಶನ್ ಜಾಮೀನು ಕೋರಿ ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಎರಡು ಬಾರಿ ಜಾಮೀನು ಅರ್ಜಿಯ ವಿಚಾರಣೆ ಮುಂದೂಡಿಕೆಯಾಗಿತ್ತು. ಇಂದು ಮತ್ತೆ ವಿಚಾರಣೆಯನ್ನು ಅಕ್ಟೋಬರ್ 4ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.
ಹೌದು .. ಇಂದು ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್, ದರ್ಶನ್ ಪರ ವಕೀಲರು ವಾದಮಂಡನೆಗೆ ಕಾಲಾವಕಾಶ ಕೋರಿದ್ದರಿಂದ ವಿಚಾರಣೆಯನ್ನು ಅಕ್ಟೋಬರ್ 4ಕ್ಕೆ ಮುಂದೂಡಿ ಆದೇಶ ಹೊರಡಿಸಿತು. ಇನ್ನು ಇಂದು ಸಂಜೆ ಪತ್ನಿ ವಿಜಯಲಕ್ಷ್ಮಿ ಬಳ್ಳಾರಿ ಜೈಲಿಗೆ ಮತ್ತೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಈ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಕೋರ್ಟ್ ಜಾಮೀನು ನೀಡಿದೆ.ಆದರೂ ಅವರಿಗೆ ಯಾರು ಷ್ಯೂರಿಟಿ ನೀಡದ ಕಾರಣ ಇನ್ನೂ ಮೂವರು ಆರೋಪಿಗಳು ಜೈಲಿನಲ್ಲಿ ಇದ್ದಾರೆ. ಹಾಗಾಗಿ ನಟ ದರ್ಶನ್ ಗೆ ಅಕ್ಟೋಬರ್ 4ರವರೆಗೆ ಜೈಲೇ ಗತಿ ಆದಂತಾಗಿದೆ