Saturday, June 6, 2026
Homeತಾಜಾ ಸುದ್ದಿಇಂದು ಶಾಸಕ ಮನಿರತ್ನ ಜಾಮೀನು ಅರ್ಜಿಯ ವಿಚಾರಣೆ

ಇಂದು ಶಾಸಕ ಮನಿರತ್ನ ಜಾಮೀನು ಅರ್ಜಿಯ ವಿಚಾರಣೆ

- Advertisement -
- Advertisement -

ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ ನೀಡಿದ, ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಅರೆಸ್ಟ್ ಆಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯ ಮಂಗಳವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಇದರ ಮಧ್ಯೆ ಮುನಿರತ್ನ ಪರ ವಕೀಲರು ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ಇಂದು ನಡೆಯಲಿದೆ.  ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಅವರಿಗೆ ಕಿರುಕುಳ ನೀಡಿರುವುದು, ಜಾತಿ ನಿಂದನೆ ಮತ್ತು ಮಹಿಳೆಯ ಗೌರವಕ್ಕೆ ಧಕ್ಕೆ ತಂದ ಆರೋಪದ ಮೇಲೆ ಬೆಂಗಳೂರಿನಲ್ಲಿ ಎರಡು ಪ್ರಕರಣಗಳು ದಾಖಲಾದ ನಂತರ ಸೆಪ್ಟೆಂಬರ್ 14 ರಂದು ಕೋಲಾರದಲ್ಲಿ ಮುನಿರತ್ನ ಅವರನ್ನು ಬಂಧಿಸಲಾಗಿತ್ತು.

- Advertisement -

Latest News

error: Content is protected !!