Friday, June 5, 2026
Homeಕರಾವಳಿಮಂಗಳೂರುಮಂಗಳೂರು: ಸಮುದ್ರದಲ್ಲಿ ಭಾರೀ ಗಾಳಿ ಬೀಸುವ ಎಚ್ಚರಿಕೆ; ಅರಬ್ಬಿ ಸಮುದ್ರದಲ್ಲಿ ಹೆಚ್ಚಾದ ಕಡಲಿನ ಅಬ್ಬರ

ಮಂಗಳೂರು: ಸಮುದ್ರದಲ್ಲಿ ಭಾರೀ ಗಾಳಿ ಬೀಸುವ ಎಚ್ಚರಿಕೆ; ಅರಬ್ಬಿ ಸಮುದ್ರದಲ್ಲಿ ಹೆಚ್ಚಾದ ಕಡಲಿನ ಅಬ್ಬರ

- Advertisement -
- Advertisement -

ಮಂಗಳೂರು: ಭಾರೀ ಮಳೆಯಿಂದಾಗಿ ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡಿದ್ದು,ಅಲೆಗಳ ಅಬ್ಬರ ಜಾಸ್ತಿಯಾಗಿದೆ‌.

ಮಂಗಳೂರಿನ ಉಚ್ಚಿಲ, ಉಳ್ಳಾಲ ಮತ್ತು ಸೋಮೇಶ್ವರ ಭಾಗದಲ್ಲಿ ಗಾಳಿಯ ಪ್ರಮಾಣ ಹೆಚ್ಚಾಗಿದ್ದು, ಕಡಲಿನ ಅಬ್ಬರವೂ ಹೆಚ್ಚಾಗಿದೆ.

ಈಗಾಗಲೇ ಭಾರತೀಯ ಹವಾಮಾನ ಇಲಾಖೆಯಿಂದ ಸಮುದ್ರದಲ್ಲಿ 65 ಕಿಲೋ ಮೀಟರ್ ನಷ್ಟು ವೇಗದಲ್ಲಿ ಭಾರೀ ಗಾಳಿ ಬೀಸುವ ಎಚ್ಚರಿಕೆ ನೀಡಲ್ಪಟ್ಟಿದ್ದು, ಜುಲೈ 27 ರವರೆಗೂ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

ಸಮುದ್ರದಲ್ಲಿ ಭಾರೀ ಗಾತ್ರದ ಅಲೆಗಳು ಏಳುವ ಎಚ್ಚರಿಕೆಯನ್ನೂ ಐಎಂಡಿ ನೀಡಿದ್ದು, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಮುನ್ನಚ್ಚರಿಕೆ ನೀಡಲಾಗಿದೆ.

- Advertisement -

Latest News

error: Content is protected !!