Thursday, June 26, 2025
Homeಚಿಕ್ಕಮಗಳೂರುಚಾರ್ಮಾಡಿ ಘಾಟ್ ನ ಬಿದಿರುತಳ ಅರಣ್ಯ ಪ್ರದೇಶದಲ್ಲಿ ಭಾರೀ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ...

ಚಾರ್ಮಾಡಿ ಘಾಟ್ ನ ಬಿದಿರುತಳ ಅರಣ್ಯ ಪ್ರದೇಶದಲ್ಲಿ ಭಾರೀ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ವ್ಯಾಪಿಸಿದ ಅಗ್ನಿ ಜ್ವಾಲೆ

spot_img
- Advertisement -
- Advertisement -

ಚಾರ್ಮಾಡಿ ಘಾಟ್ ನ ಬಿದಿರುತಳ ಅರಣ್ಯ ಪ್ರದೇಶದಲ್ಲಿ ಭಾರೀ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಅಗ್ನಿ ಜ್ವಾಲೆ ವ್ಯಾಪಿಸಿದೆ.

ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ನ ಬಿದಿರುತಳ ಅರಣ್ಯ ಪ್ರದೇಶದಲ್ಲಿ ಭಾರೀ ಕಾಡ್ಗಿಚ್ಚು ಹಬ್ಬಿದ್ದು , ಯಾವ ಕಾರಣದಿಂದ ಬೆಂಕಿ ಉಂಟಾಗಿದೆ ಎಂದು ತಿಳಿದು ಬಂದಿಲ್ಲ. ಕಾಡ್ಗಿಚ್ಚಿನಿಂದ ಪ್ರಾಣಿಸಂಕುಲ ಸೇರಿದಂತೆ ಅಪರೂಪದ ಸಸ್ಯ ಸಂಪತ್ತು ನಾಶವಾಗಿರುವ ಅಪಾಯ ಎದುರಾಗಿದೆ. ಸದ್ಯ ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ವಿಭಾಗದ ಘಾಟಿ ಪ್ರದೇಶ ಈ ಸ್ಥಳಕ್ಕೆ ಸಮೀಪದಲ್ಲಿದ್ದು, ಅಲ್ಲಿಗೂ ಬೆಂಕಿ ವ್ಯಾಪಿಸುವ ಭೀತಿ ಇದೆ. ಚಾರ್ಮಾಡಿ ಘಾಟಿಯಲ್ಲಿಹೆಚ್ಚಾಗಿ ಬೇಸಿಗೆಯಲ್ಲಿ ಪ್ರತಿ ವರ್ಷ ಬೆಂಕಿ ಅನಾಹುತ ಉಂಟಾಗುತ್ತಿದೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿಯು ಬೆಂಕಿಯನ್ನು ನಂದಿಸಲು ಹರಸಾಹಸ ಮಾಡುತ್ತಿದ್ದಾರೆ. ಉತ್ತಮ ಗಾಳಿಯಿರುವುದರಿಂದ ಬೆಂಕಿಯು ವೇಗವಾಗಿ ಹರಡುತ್ತಿದೆ. ಅರಣ್ಯಾಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು ಬೆಂಕಿ ನಂದಿಸಲು ನೆರವಾಗುತ್ತಿದ್ದಾರೆ.

- Advertisement -
spot_img

Latest News

error: Content is protected !!