- Advertisement -
- Advertisement -
ಬಂಟ್ವಾಳ, ಮೇ 5: ತಾಲೂಕಿನಾದ್ಯಂತ ಮಂಗಳವಾರ ಸಂಜೆ ಭಾರೀ ಗಾಳಿ ಬೀಸಿದ್ದು ಹಲವೆಡೆ ಮಳೆಯಾಗಿದೆ. ಗಾಳಿ ಬೀಸಿದ ಪರಿಣಾಮ ತಾಲೂಕಿನ ಕೆಲವೆಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿದ್ದು ಮನೆಗಳಿಗೆ ಹಾನಿ ಉಂಟಾಗಿದೆ.
ತಾಲೂಕಿನ ವಿಟ್ಲ, ಕಲ್ಲಡ್ಕ, ಬಿ.ಸಿ.ರೋಡ್, ಫರಂಗಿಪೇಟೆ ಸಹಿತ ಗ್ರಾಮೀಣ ಪ್ರದೇಶಗಳಲ್ಲಿ ಭಾರೀ ಗಾಳಿ ಬೀಸಿದೆ. ಜೊತೆಗೆ ಕೆಲವೆಡೆ ಸಾಧಾರಣ ಮಳೆಯಾದರೆ ವಿಟ್ಲ ಭಾಗದಲ್ಲಿ ಉತ್ತಮ ಮಳೆಯಾಗಿದೆ.
ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದ ಪರಿಣಾಮ ಗ್ರಾಮೀಣ ಭಾಗದ ಕೆಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹಾಗೆಯೇ ಕೆಲವೆಡೆ ಮನೆಗಳಿಗೆ ಹಾನಿ ಸಂಭವಿಸಿದೆ.
- Advertisement -