Friday, October 11, 2024
Homeಕರಾವಳಿಮುಂದಿನ ನಾಲ್ಕೈದು ದಿನ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಮುಂದಿನ ನಾಲ್ಕೈದು ದಿನ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

spot_img
- Advertisement -
- Advertisement -

ಬೆಂಗಳೂರು : ಹವಾಮಾನ ಇಲಾಖೆಯು ರಾಜ್ಯದ ಜನತೆಗೆ ಬಹುಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ಮುಂದಿನ ನಾಲ್ಕೈದು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ನಚ್ಚರಿಕೆ ನೀಡಿದೆ.

ನಾಳೆ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ ಮತ್ತು ಬೆಳಗಾವಿ, ಧಾರವಾಡ, ಗದಗ, ಹಾವೇರಿ ಚಿತ್ರದುರ್ಗ, ದಾವಣಗೆರೆ ಮತ್ತು ಬಳ್ಳಾರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಏಪ್ರಿಲ್ 23 ರಿಂದ 26 ರವರೆಗೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -
spot_img

Latest News

error: Content is protected !!