- Advertisement -
![]()
- Advertisement -
ಮಂಗಳೂರು: ಕರಾವಳಿಯಲ್ಲಿ ಸುರಿಯುತ್ತಿರುವ ಮಳೆಯ ಹಿನ್ನಲೆಯಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ದಟ್ಟವಾದ ಮೋಡ ಕವಿದ ವಾತಾವರಣ ಇದ್ದು, ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ.
ನಿನ್ನೆ ರಾತ್ರಿಯಿಂದಲೇ ಉಡುಪಿ ಜಿಲ್ಲೆಯಲ್ಲಿ ಮಳೆ ಮುಂದುವರಿದಿದೆ.
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಶಾಲೆಗೆ ಬರಲು ತೊಂದರೆಯಾದಲ್ಲಿ ಅಂತಹ ಕಡೆ ರಜೆ ಘೋಷಣೆ ಮಾಡಲು ಜಿಲ್ಲಾಡಳಿತ ಸೂಚನೆ ನೀಡಿದೆ.
ಈಗಾಗಾಲೆ ಶಾಲೆಗೆ ಬಂದಿರುವ ವಿದ್ಯಾರ್ಥಿಗಳಿಗೆ ಪಾಠ ನಡೆಸಲು
ಮುಂಜಾಗ್ರತೆ ವಹಿಸಿ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ.
ತಮ್ಮ ವ್ಯಾಪ್ತಿಯ ಶಾಲಾ ಮಕ್ಕಳ ಬಗ್ಗೆ ಕಟ್ಟೆಚ್ಚರ ವಹಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ
ನಿರ್ದೇಶನ ನೀಡಿದ್ದಾರೆ.
- Advertisement -


