- Advertisement -
- Advertisement -
ಬಂಟ್ವಾಳ: ತಾಲೂಕಿನ್ಯಾದಂತ ಆದಿತ್ಯವಾರ ಸಂಜೆ ಸುರಿದ ಭಾರಿ ಗಾಳಿ, ಸಿಡಿಲು, ಮಳೆ ಭೂಮಿಯನ್ನು ತಂಪಾಗಿಸಿದೆ. ನೀರಿನ ಅಭಾವದಿಂದ ಕಂಗೆಟ್ಟಿರುವ ಕೃಷಿಕರಿಗೆ ಕೊಂಚ ರಿಲೀಫ್ ನೀಡಿದೆ.
ಸುಮಾರು ಒಂದು ತಾಸಿಗಿಂತಲೂ ಅಧಿಕವಾಗಿ ಎಡೆ ಬಿಡದೆ ಸುರಿದ ಗಾಳಿ ಮಳೆಗೆ ಅನೇಕ ಕಡೆಗಳಲ್ಲಿ ಅಡಿಕೆ ಮರಗಳು ನೆಲಕ್ಕುರುಳಿದೆ. ಸುರಿದ ಭಾರಿ ಮಳೆಗೆ ಕೆಲವೊಂದು ಕಡೆಗಳಲ್ಲಿ ನೀರು ಹರಿದು ಹೋಗಲು ಸರಿಯಾದ ಚರಂಡಿ ಇಲ್ಲದೆ ಕೊಂಚ ಮಟ್ಟಿಗೆ ಕೃಷಿಕರಿಗೆ ತೊಂದರೆಯೂ ಅಗಿದೆ.
ಅರಂತೋಡು, ತೊಡಿಕಾನ, ಸಂಪಾಜೆ, ಕಡಬ, ಸುಬ್ರಹ್ಮಣ್ಯ ಪರಿಸರದಲ್ಲಿ ಗುಡುಗು ಸಹಿತ ಮಳೆಯಾಗಿದೆ.
- Advertisement -