- Advertisement -
![]()
- Advertisement -
ಮಂಗಳೂರು: ರಾಜ್ಯದ ಹಲವೆಡೆ ಕುಂಭದ್ರೋಣ ಮಳೆಯಾಗುತ್ತಿದ್ದು, ಮಳೆಗೆ ಜನಜೀವನ ತತ್ತರಿಸಿದೆ. ಇದೀಗ ಇನ್ನೂ ಎರಡು ದಿನ ಅಲರ್ಟ್ ನೀಡಲಾಗಿದೆ. ಕರಾವಳಿಯಲ್ಲಿ ಮುಂದಿನ ಎರಡು ದಿನ ಧಾರಾಕಾರ ಮಳೆ ಮುಂದುವರಿಯಲಿದ್ದು, ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಿಗೆ ಅತ್ಯಧಿಕ ಮಳೆ ಬೀಳುವ ನಿರೀಕ್ಷೆ ಹಿನ್ನೆಲೆ ’ರೆಡ್ ಅಲರ್ಟ್’ ಎಚ್ಚರಿಕೆ ನಿಡಲಾಗಿದೆ.
ಕರಾವಳಿ ಜಿಲ್ಲೆಗಳಿಗೆ ಸೆ.21 ಹಾಗೂ 22 ರಂದು ಹಾಗೂ ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಸೆ. 21ರಂದು ‘ರೆಡ್ ಅಲರ್ಟ್’ ನೀಡಲಾಗಿದೆ. ಸೆ. 22ರಂದು ಪುನಃ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. 38 ವರ್ಷಗಳ ದಾಖಲೆ ಮಳೆಗೆ ಉಡುಪಿ ಸಂಪೂರ್ಣ ಜಲಾವೃತಗೊಂಡಿದೆ.
- Advertisement -


