Sunday, May 26, 2024
Homeಕೊಡಗುಭಾಗಮಂಡಲದಲ್ಲಿ ಭಾರೀ ಮಳೆ: ತ್ರಿವೇಣಿ ಸಂಗಮ ಜಲಾವೃತ

ಭಾಗಮಂಡಲದಲ್ಲಿ ಭಾರೀ ಮಳೆ: ತ್ರಿವೇಣಿ ಸಂಗಮ ಜಲಾವೃತ

spot_img
- Advertisement -
- Advertisement -

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಭಾಗಮಂಡಲದ ತ್ರಿವೇಣಿ ಸಂಗಮ‌ ಜಲಾವೃತವಾಗಿದೆ. ಭಾಗಮಂಡಲದಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ಭಾಗಮಂಡಲ -ನಾಪೋಕ್ಲು ಸೇತುವೆ ಮುಳುಗಡೆಯಾಗಿದೆ.‌ ಇದರಿಂದಾಗಿ ಭಾಗಮಂಡಲ ಮತ್ತು ನಾಪೋಕ್ಲು ನಡುವಿನ ಸಂಪರ್ಕ ಕಡಿತಗೊಂಡಿದೆ.

ಇನ್ನು ಮಡಿಕೇರಿ ತಾಲೂಕಿನ ಕಕ್ಕಬ್ಬೆ ಗ್ರಾಮದಲ್ಲಿ ಪ್ರವಾಹ ಸ್ಥಿತಿ ತಲೆದೋರಿದ್ದು, ಕಕ್ಕಬ್ಬೆ-ಕುಂಜಿಲ ಗ್ರಾಮದ ಸಂಪರ್ಕ ಕಡಿತವಾಗಿದೆ. ಕಕ್ಕಬ್ಬೆ ಹೊಳೆ ಉಕ್ಕಿ ಹರಿಯುತ್ತಿದ್ದು, ಮೂರ್ನಾಡು-ನಾಪೋಕ್ಲು ರಸ್ತೆ ಸಂಪರ್ಕವೂ ಕಡಿತವಾಗಿದೆ.

ಮುಖ್ಯ ರಸ್ತೆಯ ಮೇಲೆ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ಲಕ್ಷ್ಮಣ ತೀರ್ಥ ನದಿಯಲ್ಲಿ ಪ್ರವಾಹದ ರೀತಿಯಲ್ಲಿ ನೀರು ಹರಿಯುತ್ತಿರುವ ಕಾರಣ ಪೊನ್ನಂಪೇಟೆ ತಾಲೂಕಿನ ಕಾನೂರು-ನಿಡುಗುಂಬ ಗ್ರಾಮಗಳ ಸಂಪರ್ಕ‌ ಕಡಿತಗೊಂಡಿದೆ.

- Advertisement -
spot_img

Latest News

error: Content is protected !!