Tuesday, July 21, 2026
Homeಕರಾವಳಿಉಡುಪಿಕರಾವಳಿ ಹಾಗೂ ಕೊಡಗಿನಲ್ಲಿ ಇನ್ನೂ 5 ದಿನ ಭಾರೀ ಮಳೆ: ಹವಾಮಾನ ಇಲಾಖೆಯಿಂದ ಮಾಹಿತಿ

ಕರಾವಳಿ ಹಾಗೂ ಕೊಡಗಿನಲ್ಲಿ ಇನ್ನೂ 5 ದಿನ ಭಾರೀ ಮಳೆ: ಹವಾಮಾನ ಇಲಾಖೆಯಿಂದ ಮಾಹಿತಿ

- Advertisement -
- Advertisement -

ಮಂಗಳೂರು : ಭಾರೀ ಮಳೆಯಿಂದಾಗಿ ತತ್ತರಿಸಿರುವ ಕರಾವಳಿ ಮತ್ತು ಕೊಡಗು ಜಿಲ್ಲೆಯಲ್ಲಿ ಇನ್ನೂ 5 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಚನ್ನಬಸವನಗೌಡ ಎಸ್.ಪಾಟೀಲ್ ಭಾನುವಾರ ಮುನ್ನೆಚ್ಚರಿಕೆ ನೀಡಿದ್ದು, ಭಾನುವಾರ ಕೊಡಗು ಮತ್ತು ಕರಾವಳಿಯಲ್ಲಿ ಮಳೆಯ ಪ್ರಮಾಣ ಕಡಿಮೆ ಆಗಿದ್ದರೂ ಇನ್ನೂ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ವ್ಯಾಪಕ ಮಳೆ ಮುಂದುವರಿಯಲಿದೆ. ಅಲ್ಲದೇ ರಾಜ್ಯದ ಒಳನಾಡಿನಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಅವರು ವಿವರಿಸಿದ್ದಾರೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಇನ್ನೆರಡು ದಿನ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

- Advertisement -

Latest News

error: Content is protected !!