Thursday, June 25, 2026
Homeಕರಾವಳಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಜು.9 ರಂದು ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಜು.9 ರಂದು ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಜಿಲ್ಲಾದ್ಯಂತ ತಗ್ಗು ಪ್ರದೇಶಗಳಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಿಟ್ಟಿನಲ್ಲಿ ಜುಲೈ 9 ಮಂಗಳವಾರದಂದು ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಭಾನುವಾರ ಸಂಜೆಯೊಂದಲೂ ಭಾರೀ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ ಸೋಮವಾರ ರಜೆ ಘೋಷಿಸಲಾಗಿತ್ತು. ಇನ್ನು ತುರ್ತು ಸೇವೆಗೆ 24*7 ಕಂಟ್ರೋಲ್ ರೂಮ್ ಟೋಲ್ ಫ್ರೀ ದೂರವಾಣಿ ಸಂಖ್ಯೆ ಯನ್ನು 1077/ 0824-2442590 ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ.

- Advertisement -

Latest News

error: Content is protected !!