Saturday, June 6, 2026
Homeಕರಾವಳಿಉಡುಪಿಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ : ಆದಿ ಸುಬ್ರಹ್ಮಣ್ಯ ದೇವಸ್ಥಾನ ಜಲಾವೃತ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ : ಆದಿ ಸುಬ್ರಹ್ಮಣ್ಯ ದೇವಸ್ಥಾನ ಜಲಾವೃತ

- Advertisement -
- Advertisement -

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಮಳೆ ಅಬ್ಬರಕ್ಕೆ ‌ಹಲವಡೆ ಹೊಳೆಗಳು ಉಕ್ಕಿ ಹರಿಯುತ್ತಿವೆ.

ಕುಕ್ಕೆ ಸುಬ್ರಹ್ಮಣ್ಯದ ದರ್ಪಣ ತೀರ್ಥ ನದಿ ಉಕ್ಕಿ ಹರಿದು ಆದಿ ಸುಬ್ರಮಣ್ಯ ದೇವಸ್ಥಾನಕ್ಕೆ ನೀರು‌ ನುಗ್ಗಿ ಸಂಪೂರ್ಣ ಜಲಾವೃತಗೊಂಡಿದೆ.

ಕುಕ್ಕೆ ಸುಬ್ರಹ್ಮಣ್ಯ ವ್ಯಾಪ್ತಿಯ ಸಣ್ಣಪುಟ್ಟ ಸೇತುವೆಗಳು ಮುಳುಗಡೆಯಾಗಿದ್ದು, ಸಂಜೆ 5 ಗಂಟೆಯಿಂದ ಎಡೆಬಿಡದೇ ಮಳೆ ಸುರಿಯುತ್ತಿದೆ. ಭಾರೀ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ‌ಆಗಮಿಸಿದ ಭಕ್ತರು ಪರದಾಡುವಂತಾಗಿದೆ.

ಅಲ್ಲದೇ ಹರಹರ ಪಲ್ಲತಡ್ಕ, ಕೊಲ್ಲಮೊಗರು ಮತ್ತು ಕಲ್ಮಕಾರು ಗ್ರಾಮಗಳಲ್ಲಿ ಕೂಡಾ ನದಿಗಳು ಉಕ್ಕಿ ಹರಿದಿದ್ದು ಸೇತುವೆಗಳು ಮುಳುಗಡೆಯಾಗಿ ಕೆಲವೆಡೆ ಮನೆಗಳಿಗೆ ನೀರು ನುಗ್ಗಿದೆ.

- Advertisement -

Latest News

error: Content is protected !!