Sunday, May 19, 2024
Homeತಾಜಾ ಸುದ್ದಿಮಹಾರಾಷ್ಟ್ರದಲ್ಲಿ ಮಹಾ ಮಳೆ: ಕೊಂಕಣ ರೈಲ್ವೆ ಸಂಚಾರ ಅಸ್ತವ್ಯಸ್ತ!!

ಮಹಾರಾಷ್ಟ್ರದಲ್ಲಿ ಮಹಾ ಮಳೆ: ಕೊಂಕಣ ರೈಲ್ವೆ ಸಂಚಾರ ಅಸ್ತವ್ಯಸ್ತ!!

spot_img
- Advertisement -
- Advertisement -

ಮುಂಬೈ: ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ರತ್ನಗಿರಿ ಜಿಲ್ಲೆಯ ಕೊಂಕಣ ರೈಲ್ವೆ ಮಾರ್ಗದ ರೈಲು ಸಂಚಾರ ಅಸ್ತವ್ಯಸ್ತಗೊಂಡಿದೆ. ಸರಿ ಸುಮಾರು 6,000 ಪ್ರಯಾಣಿಕರು ವಿವಿಧ ರೈಲುಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಹಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಕೊಂಕಣ ಪ್ರದೇಶದ ರತ್ನಗಿರಿ ಹಾಗೂ ರಾಯಗಡ್ ಜಿಲ್ಲೆಗಳಲ್ಲಿನ ಪ್ರಮುಖ ನದಿಗಳು ಅಪಾಯದ ಮಟ್ಟವನ್ನು ಮೀರಿ ಉಕ್ಕಿ ಹರಿಯುತ್ತಿವೆ.

ಇದುವರೆಗೆ 9 ರೈಲುಗಳ ಸೇವೆಯನ್ನು ನಿಯಂತ್ರಿಸಲಾಗಿದೆ. ಅಂದರೆ, ಕೆಲ ರೈಲುಗಳ ಸಂಚಾರವನ್ನು ಅರ್ಧಕ್ಕೆ ಸ್ಥಗಿತಗೊಳಿಸಲಾಗಿದ್ದರೆ, ಕೆಲ ರೈಲುಗಳ ಸಂಚಾರ ರದ್ದು ಮಾಡಲಾಗಿದೆ. ಮತ್ತೆ ಕೆಲವು ರೈಲುಗಳ ಮಾರ್ಗ ಬದಲಿಸಲಾಗಿದೆ.ಈ ರೈಲುಗಳು ವಿವಿಧ ನಿಲ್ದಾಣಗಳಲ್ಲಿ ಸುರಕ್ಷಿತ ಸ್ಥಳಗಳಲ್ಲಿವೆ. ಅವುಗಳಲ್ಲಿದ್ದ ಪ್ರಯಾಣಿಕರು ಸಹ ಸುರಕ್ಷಿತರಾಗಿದ್ದಾರೆ. ಅವರಿಗೆ ಆಹಾರ ಮತ್ತು ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಕೊಂಕಣ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ರತ್ನಗಿರಿಯ ಚಿಪ್ಲುನ್ ಹಾಗೂ ಕಾಮಥೆ ನಿಲ್ದಾಣಗಳ ನಡುವಿನ ವಶಿಷ್ಠ ನದಿ ಸೇತುವೆಯಲ್ಲಿನ ನೀರಿನ ಮಟ್ಟವು ಭಾರಿ ಮಳೆಯ ನಂತರ ಅಪಾಯದ ಮಟ್ಟ ದಾಟಿದೆ. ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ, ಈ ವಿಭಾಗದಲ್ಲಿ ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕೊಂಕಣ ರೈಲ್ವೆಯ ವಕ್ತಾರರು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!