Saturday, June 6, 2026
Homeತಾಜಾ ಸುದ್ದಿಮಳೆ ಅಬ್ಬರಕ್ಕೆ ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಸಂಪೂರ್ಣ ಮುಳುಗಡೆ

ಮಳೆ ಅಬ್ಬರಕ್ಕೆ ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಸಂಪೂರ್ಣ ಮುಳುಗಡೆ

- Advertisement -
- Advertisement -

ಕುಕ್ಕೆ ಸುಬ್ರಹ್ಮಣ್ಯ: ಜಿಲ್ಲೆಯ ನಾನಾಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಧಾರಾಕಾರ ಮಳೆಗೆ ಪಶ್ಚಿಮ ಘಟ್ಟದ ತಪ್ಪಲಿನ ಭಾಗದಲ್ಲಿ ಅಲ್ಲೋಲ-ಕಲ್ಲೋಲವಾಗಿದೆ. ಸೋಮವಾರ ಮಧ್ಯಾಹ್ನದಿಂದ ಆರಂಭವಾದ ಮಳೆ ಒಂದೇ ಸಮನೆ ಸುರಿಯುತ್ತಿರೋದ್ರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡು ಮಲೆನಾಡಿಗರು ಕಂಗಾಲಾಗಿದ್ದಾರೆ.

ಕಡಬ ತಾಲೂಕಿನ ಸುಬ್ರಹ್ಮಣ್ಯ ಪರಿಸರದಲ್ಲೂ ಬೆಳಿಗ್ಗೆಯಿಂದ ನಿರಂತರ ಮಳೆಯಾಗುತ್ತಿದ್ದು, ಕುಮಾರಧಾರಾ ನದಿಯಕ್ಕಿ ನೀರು ಉಕ್ಕಿ ಹರಿಯುತ್ತಿದೆ. ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.

ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಕಡಬ, ನೆಲ್ಯಾಡಿ, ಗುಂಡ್ಯ, ಉಪ್ಪಿನಂಗಡಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇದೇ ತರಹ ಮಳೆ ಮುಂದುವರೆದದ್ದೇ ಆದಲ್ಲಿ ಬೆಳಗಿನ ವೇಳೆಗೆ ಕೆಳಮಟ್ಟದ ಹಲವಾರು ಸೇತುವೆಗಳು ಮುಳುಗಡೆ ಹೊಂದಿ ರಸ್ತೆ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಇದೆ.

- Advertisement -

Latest News

error: Content is protected !!