Sunday, June 7, 2026
Homeಕರಾವಳಿಉಡುಪಿಜೂನ್ 8ರಂದ 11 ರವರೆಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ;...

ಜೂನ್ 8ರಂದ 11 ರವರೆಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ;  ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ

- Advertisement -
- Advertisement -

ಮಂಗಳೂರು; ಜೂನ್ 8ರಂದ 11 ರವರೆಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಎಂದು  ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.. ಜೊತೆಗೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ ಎಂದಿದೆ.

ಜೂನ್ 8ರಂದ 11 ರವರೆಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ  ಸಂಭವಿಸುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಕೆಲವೆಡೆ ಭಾರೀ ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಅಲ್ಲದೇ ಸಾರ್ವಜನಿಕರಿಗೆ ಕೆಲವೊಂದು ಎಚ್ಚರಿಕೆ ನೀಡಿದೆ

ನದಿ, ಹೊಳೆ ಮತ್ತು ತಗ್ಗು ಪ್ರದೇಶಗಳ ಬಳಿ ಎಚ್ಚರಿಕೆಯಿಂದ ಇರಬೇಕು.

ಸಮುದ್ರ ತೀರ ಪ್ರದೇಶದ ನಿವಾಸಿಗಳು ಹಾಗೂ ಮೀನುಗಾರರು ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸಬೇಕು.

ಮರಗಳ ಕೆಳಗೆ ಅಥವಾ ದುರ್ಬಲ ಕಟ್ಟಡಗಳ ಬಳಿ ನಿಲ್ಲುವುದನ್ನು ತಪ್ಪಿಸಬೇಕು.

ಅಗತ್ಯವಿಲ್ಲದ ಪ್ರಯಾಣಗಳನ್ನು ಸಾಧ್ಯವಾದಷ್ಟು ಮುಂದೂಡಲು ಸಲಹೆ ನೀಡಲಾಗಿದೆ.

ಹವಾಮಾನ ಇಲಾಖೆಯು ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸುತ್ತಿದ್ದು, ಮುಂದಿನ ದಿನಗಳಲ್ಲಿ ನವೀಕೃತ ಮುನ್ಸೂಚನೆಗಳನ್ನು ಪ್ರಕಟಿಸಲಿದೆ.

- Advertisement -

Latest News

error: Content is protected !!