Wednesday, July 15, 2026
Homeಕರಾವಳಿಕರಾವಳಿಯಲ್ಲಿ ವರುಣನ ರೌದ್ರಾವತಾರ: ನಾಳೆಯು ದಕ್ಷಿಣಕನ್ನಡ ಜಿಲ್ಲೆಯಲ್ಲಿ‌ ಶಾಲಾ ಕಾಲೇಜುಗಳಿಗೆ ರಜೆ

ಕರಾವಳಿಯಲ್ಲಿ ವರುಣನ ರೌದ್ರಾವತಾರ: ನಾಳೆಯು ದಕ್ಷಿಣಕನ್ನಡ ಜಿಲ್ಲೆಯಲ್ಲಿ‌ ಶಾಲಾ ಕಾಲೇಜುಗಳಿಗೆ ರಜೆ

- Advertisement -
- Advertisement -

ಮಂಗಳೂರು: ದ.ಕ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲೆಯಲ್ಲಿ ಕಳೆದ ಕೆಲದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ನೇತ್ರಾವತಿ, ಕುಮಾರಧಾರಾ, ಗುರುಪುರ, ಗುಂಡ್ಯ‌ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಹೊರಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

- Advertisement -

Latest News

error: Content is protected !!