Sunday, May 19, 2024
Homeಕರಾವಳಿನಾಳೆಯಿಂದ ರಾಜ್ಯದ ದಕ್ಷಿಣ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ನಾಳೆಯಿಂದ ರಾಜ್ಯದ ದಕ್ಷಿಣ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

spot_img
- Advertisement -
- Advertisement -

ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿಯ ತೀವ್ರತೆ ಮುಂದುವರಿದಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ.

ಜೂನ್ ಮೊದಲ ವಾರ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದ್ದು, ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾಗಿರುವುದರಿಂದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.

ಇದೇ ವೇಳೆ ಬಂಗಾಳಕೊಲ್ಲಿಯಲ್ಲಿಯೂ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿದ್ದು ಮುಂಗಾರು ಮಾರುತ ಪ್ರವೇಶಕ್ಕೆ ಅನುಕೂಲಕರವಾದ ವಾತಾವರಣ ನಿರ್ಮಾಣವಾಗತೊಡಗಿದೆ. ಜೂನ್ 1 ರ ವೇಳೆಗೆ ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದ್ದು ಒಂದೆರಡು ದಿನಗಳಲ್ಲಿ ಕರ್ನಾಟಕಕ್ಕೆ ಪ್ರವೇಶಿಸಬಹುದು ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಜಿ.ಎಸ್. ಶ್ರೀನಿವಾಸರೆಡ್ಡಿ ಹೇಳಿದ್ದಾರೆ.

ಮೇ 31 ರಿಂದ ಜೂನ್ 2 ರ ವರೆಗೆ ಕರಾವಳಿ ಭಾಗದಲ್ಲಿ ಮಳೆಯಾಗಲಿದೆ. ಜೂನ್ 1 ರವರೆಗೆ ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಅದೇ ರೀತಿ ಶಿವಮೊಗ್ಗ, ದಕ್ಷಿಣ ಕನ್ನಡ, ಹಾಸನ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಮಳೆ ಬರುವ ವೇಳೆ 30 ರಿಂದ 50 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -
spot_img

Latest News

error: Content is protected !!