Monday, June 8, 2026
Homeಇತರರಾಜ್ಯದಲ್ಲಿ 1ರಂದು ಭಾರಿ ಮಳೆ ಸಾಧ್ಯತೆ...! ಕರಾವಳಿ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ...!

ರಾಜ್ಯದಲ್ಲಿ 1ರಂದು ಭಾರಿ ಮಳೆ ಸಾಧ್ಯತೆ…! ಕರಾವಳಿ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ…!

- Advertisement -
- Advertisement -

ರಾಜ್ಯದ 12 ಜಿಲ್ಲೆಗಳಲ್ಲಿ ನವೆಂಬರ್ 1 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಅತಿಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ನಿರಂತರ ಮಳೆಯಿಂದಾಗಿ ಸಂಕಷ್ಟದಲ್ಲಿ ಸಿಲುಕಿರುವ ಕೇರಳದಲ್ಲಿ ಮತ್ತೆ ವರುಣ ದೇವ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೇರಳ ಮತ್ತು ಮಾಹೆ, ಕರ್ನಾಟಕದ ದಕ್ಷಿಣ ಒಳನಾಡು, ತಮಿಳುನಾಡು, ಪುದುಚೇರಿ ಹಾಗೂ ಕಾರೈಕಲ್ ಭಾಗಗಳಲ್ಲಿ ಅಕ್ಟೋಬರ್ 29 ರಿಂದ 30ರವರೆಗೆ ಗುಡುಗು-ಸಿಡಿಲು ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

Latest News

error: Content is protected !!