Sunday, August 2, 2026
Homeಪ್ರಮುಖ-ಸುದ್ದಿಕೇರಳದ ಇಡುಕ್ಕಿಯಲ್ಲಿ ಭಾರೀ ಮಳೆಗೆ ಭೂಕುಸಿತ; ಮೂವರು ಸಾವು; ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ

ಕೇರಳದ ಇಡುಕ್ಕಿಯಲ್ಲಿ ಭಾರೀ ಮಳೆಗೆ ಭೂಕುಸಿತ; ಮೂವರು ಸಾವು; ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ

- Advertisement -
- Advertisement -

ತಿರುವನಂತಪುರಂ: ಕೇರಳದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಇಡುಕ್ಕಿ ಜಿಲ್ಲೆಯಲ್ಲಿ ವ್ಯಾಪಕ ಭೂಕುಸಿತ ಸಂಭವಿಸಿದ್ದು, ಇಡುಕ್ಕಿ ಹಾಗೂ ಕೊಟ್ಟಾಯಂ ಜಿಲ್ಲೆಗಳಲ್ಲಿ ನಡೆದ ಪ್ರತ್ಯೇಕ ದುರಂತಗಳಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದಾರೆ.

ಹಲವರು ಮಣ್ಣಿನ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳದಲ್ಲಿ ರಕ್ಷಣಾ ತಂಡಗಳಿಂದ ಕಾರ್ಯಾಚರಣೆ ಭರದಿಂದ ಸಾಗಿದೆ. ಇಡುಕ್ಕಿಯ ವಾಗಮನ್ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತಕ್ಕೆ ಮನೆ ಧರಾಶಾಯಿಯಾದ ಪರಿಣಾಮ ವೈಕಂ ಮೂಲದ ಪ್ರಭಾಕರನ್ ನಾಯರ್ ಎಂಬುವವರು ಮೃತಪಟ್ಟಿದ್ದು, ಅವರ ಮೃತದೇಹಕ್ಕಾಗಿ ಅಧಿಕಾರಿಗಳು ಶೋಧ ಮುಂದುವರಿಸಿದ್ದಾರೆ.

ಈ ಮಧ್ಯೆ, ಜಿಲ್ಲೆಯ ಸಣ್ಣ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೆಲವು ಡ್ಯಾಂಗಳ ಗೇಟ್‌ಗಳನ್ನು ತೆರೆಯಲು ಅಧಿಕಾರಿಗಳು ಆದೇಶಿಸಿದ್ದಾರೆ.

- Advertisement -

Latest News

error: Content is protected !!